‘ಕೋತಿ ತಾನು ತಿಂದು ಮೇಕೆ ಬಾಯಿಗೆ ಒರೆಸಿದಂತಿದೆ ಕುಮಾರಸ್ವಾಮಿಯವರ ಆರೋಪ’

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.19-ಕೋತಿ ತಾನು ತಿಂದು ಮೇಕೆ ಬಾಯಿಗೆ ಒರೆಸಿದಂತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಆರೋಪಕ್ಕೆ ಬಿಜೆಪಿ ಯುವ ಮೋರ್ಚಾ ಪ್ರಧಾನಕಾರ್ಯದರ್ಶಿ ಹಾಗೂ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಈ ಸಂಬಂಧ ಟ್ವೀಟ್‍ಮಾಡಿರುವ ಅವರು ಕಮೀಷನ್ ದಂಧೆ, ವರ್ಗಾವಣೆ ದಂಧೆ, ನೇಮಕಾತಿ ದಂಧೆಗಳ ಜನಕರು ಹಾಗೂ ಗುತ್ತಿಗೆದಾರರು ನೀವು ಎಂಬುದು ಇಡೀ ರಾಜ್ಯಕ್ಕೆ ತಿಳಿದಿದೆ ಕುಮಾರಸ್ವಾಮಿಯವರೇ ಎಂದು ಟಾಂಗ್ ನೀಡಿದ್ದಾರೆ.ಕುಮಾರಸ್ವಾಮಿಯವರ ಮಾತುಗಳು ಕೋತಿ ತಾನು ತಿಂದು ಮೇಕೆ ಬಾಯಿಗೆ ಒರೆಸಿದಂತಿದೆ.

ಸಿಬಿಐ ತನಿಖೆಗೆ ಹೆದರಿ ಹತಾಶೆ ಹೇಳಿಕೆ ನೀಡುತ್ತಿದ್ದೀರಿ. ವಿಷಯಾಂತರಗೊಳಿಸಿ ದಿಕ್ಕು ತಪ್ಪಿಸುವ ಕುತಂತ್ರದ ಮಾತು ನಿಲ್ಲಿಸಿ ಎಂದು ಟ್ವೀಟರ್‍ನಲ್ಲಿಯೇ ಕುಮಾರಸ್ವಾಮಿ ಆರೋಪಕ್ಕೆ ಪ್ರತ್ಯುತ್ತರ ನೀಡಿದ್ದಾರೆ.

ನಿನ್ನೆ ಕುಮಾರಸ್ವಾಮಿಯವರು ಯಡಿಯೂರಪ್ಪ ತಮ್ಮ ಮಗನನ್ನು ಮುಂದೆ ಬಿಟ್ಟು ಅಧಿಕಾರಿಗಳ ವರ್ಗಾವಣೆ ದಂಧೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದರು.

Facebook Comments