ಯಡಿಯೂರಪ್ಪ ಮತ್ತೆ ಸಿಎಂ ಆಗೋದು ಖಚಿತ : ವಿಜೇಯಂದ್ರ

ಈ ಸುದ್ದಿಯನ್ನು ಶೇರ್ ಮಾಡಿ

ಚೇಳೂರು, ಜು.5-ಗುಬ್ಬಿ ತಾಲ್ಲೂಕಿನ ಮುದ್ದಪುರ ಗ್ರಾಮದ ಶ್ರೀ ಶನಿದೇವರ ಸ್ವಾಮಿ ದೇವಾಲಯಕ್ಕೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಯುವ ನಾಯಕ ವಿಜೇಯಂದ್ರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದ್ದು ಮುಂದಿನ ದಿನಗಳಲ್ಲಿ ಯಡಿಯೂರಪ್ಪನವರು ಮತ್ತೆ ಈ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುವ ಕಾಲ ಹತ್ತಿರದಲ್ಲಿದೆ.

ಹಾಗಾಗಿ ಈಗಾಗಲೇ ಲೋಕಸಭೆ ಚುನಾವಣೆಯಲ್ಲಿ 25 ಕ್ಷೇತ್ರಗಳಲ್ಲಿ ಜನತೆ ಬಿಜೆಪಿಗೆ ಗೆಲುವು ನೀಡಿ ನರೇಂದ್ರ ಮೋದಿಯವರು ಜನಪರ ಯೋಜನೆಗಳನ್ನು ಜಾರಿಗೆ ತಂದು ಒಳ್ಳೆಯ ಆಡಳಿತ ನೀಡುತ್ತಿದ್ದಾರೆ ಎಂದು ತಿಳಿಸಿದರು.

ಯಡಿಯೂರಪ್ಪನವರು ಮುಖ್ಯಮಂತ್ರಿ ಆದಾಗ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೆ ತಂದು ಒಳ್ಳೆಯ ಆಡಳಿತ ನೀಡಿದ್ದರು. ಶನಿದೇವರ ಆಶೀರ್ವಾದದಿಂದ ಮುಂದಿನ ದಿನಗಳಲ್ಲಿ ಮತ್ತೆ ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ತಿಳಿಸಿದರು.

ಶಾಸಕ ಜ್ಯೋತಿಗಣೇಶ್ , ಬಿಜೆಪಿ ಮುಖಂಡ ಬೆಟ್ಟಸ್ವಾಮಿ , ತಾಲ್ಲೂಕ್ ಪ್ರದಾನ ಕಾರ್ಯದರ್ಶಿ ಎಂ ಎನ್ ಭೀಮಶೆಟ್ಟಿ , ಟಿಎಪಿಎಂಸಿ ಅಧ್ಯಕ್ಷ ಕಿಡಿಗಣ್ಣಪ್ಪ ಗ್ರಾಮ ಪಂಚಾಯಿತಿ ಸದಸ್ಯೆ ನೀಲಮ್ಮ ಸಿದ್ದರಾಮೆಶ್ ,ಮುಖಂಡರಾದ ಸೋಮಲಾಪುರ ಸೋಮಣ್ಣ , ಎನ್ ಸಿ ಪ್ರಕಾಶ್ , ಜಾನಿ ಸಿದ್ದರಾಮೇಶ್ , ವಿಜಯ್ ಕುಮಾರ್ , ಅಣ್ಣಿ , ಮುಂತಾದವರು ಭಾಗವಹಿಸಿದ್ದರು.

Facebook Comments