“ಹೌದು… ಹೌದು..ನನ್ನ ಗಂಡನಿಗೆ ಸರಿಯಾದ ಶಿಕ್ಷೆಯಾಗಿದೆ” : ವಿಕಾಸ್ ದುಬೆಯ ಹೆಂಡತಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಜು.11- ಹೌದು… ಹೌದು.. ಹೌದು… ನನ್ನ ಗಂಡ ಇದುವರೆಗೂ ಮಾಡಿದ್ದೆಲ್ಲವೂ ತಪ್ಪೇ… ಆತನ ಅಪರಾಧಗಳಿಗೆ ತಕ್ಕ ಶಿಕ್ಷೆಯಾಗಿದೆ ಎಂದು ಕುಖ್ಯಾತ ರೌಡಿ ವಿಕಾಸ್ ದುಬೆಯ ಹೆಂಡತಿ ತನ್ನ ಗಂಡನ ಅಂತ್ಯಕ್ರಿಯೆ ವೇಳೆ ಆಕ್ರೋಶ ಹೊರಹಾಕಿದ್ದಾರೆ.

ವಿಕಾಸ್ ದುಬೆ ಮೇಲೆ ನಿನ್ನೆ ಬೆಳಗ್ಗೆ ಉತ್ತರ ಪ್ರದೇಶದ ಕಾನ್ಪುರದ ಬಳಿ ಪೊಲೀಸರು ಎನ್‍ಕೌಂಟರ್ ನಡೆದಿತ್ತು. ಪೊಲೀಸ್ ಎನ್ಕೌಂಟರ್‍ನಲ್ಲಿ ಸಾವನ್ನಪ್ಪಿದ ಗ್ಯಾಂಗ್ಸ್ಟರ್ ವಿಕಾಸ್ ದುಬೆಯ ಅಂತ್ಯಕ್ರಿಯೆಯನ್ನು ಬಿಗಿ ಭದ್ರತೆಯಲ್ಲಿ ನಿನ್ನೆಯೇ ನೆರವೇರಿಸಲಾಗಿದೆ.

ಈ ವೇಳೆ ವಿಕಾಸ್ ದುಬೆಯ ಹೆಂಡತಿ ರಿಚಾ ಅವರು ಪೊಲೀಸರು ಮತ್ತು ಮಾಧ್ಯಮಗಳ ಮೇಲೆ ಹರಿಹಾಯ್ದ ಘಟನೆಯೂ ನಡೆದಿದೆ. ವಿಕಾಸ್ ದುಬೆಯವರ ದುರಂತ ಅಂತ್ಯದ ಬಗ್ಗೆ ಮಾಧ್ಯಮಗಳು ರಿಚಾ ಅವರ ಬಳಿ ಪ್ರತಿಕ್ರಿಯೆ ಕೇಳಿದಾಗ, ಕೋಪದಿಂದ ಕಿರುಚಾಡಿದ ರಿಚಾ, ಹೌದು, ಹೌದು, ಹೌದು ನನ್ನ ಗಂಡ ತಪ್ಪು ಮಾಡಿದ್ದ.

ಇದೇ ರೀತಿ ಸಾಯಬೇಕೆಂಬುದು ಆತನ ಹಣೆಬರಹದಲ್ಲಿತ್ತು ಎಂದು ಆಕ್ರೋಶ ಹೊರಹಾಕಿದ್ದಾರಲ್ಲದೆ ವಿಕಾಸ್ ದುಬೆ ಎನ್‍ಕೌಂಟರ್‍ಗೆ ಮಾಧ್ಯಮಗಳೂ ಕಾರಣ ಎಂದು ದೂರಿದ್ದಾರೆ. ವಿಕಾಸ್ ದುಬೆ ಅಪ್ಪ ರಾಮ್‍ಕುಮಾರ್ ದುಬೆ ತಾವು ಅಂತ್ಯಕ್ರಿಯೆಯಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿಸಿದರು. ಹೀಗಾಗಿ, ವಿಕಾಸ್ ದುಬೆಯ ಭಾವ ದಿನೇಶ್ ತಿವಾರಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

ಉತ್ತರ ಪ್ರದೇಶದ ಕಾನ್ಪುರದಲ್ಲಿ 8 ಪೊಲೀಸ್ ಸಿಬ್ಬಂದಿಯನ್ನು ಗುಂಡಿಕ್ಕಿ ಕೊಂದಿದ್ದ ಗ್ಯಾಂಗಸ್ಟರ್ ವಿಕಾಸ್ ದುಬೆಯನ್ನು ಬಂಧಿಸಿ ಕಾನ್ಪುರಕ್ಕೆ ಕರೆದೊಯ್ಯುವಾಗ ಪೊಲೀಸ್ ವಾಹನ ಪಲ್ಟಿ ಹೊಡೆದಿತ್ತು.

ಈ ವೇಳೆ ಪೊಲೀಸರ ಬಳಿಯಿದ್ದ ಗನ್ ಎತ್ತಿಕೊಂಡು ಪರಾರಿಯಾಗಲು ಪ್ರಯತ್ನಿಸಿದ್ದ ವಿಕಾಸ್ ದುಬೆಯನ್ನು ಎನ್ಕೌಂಟರ್‍ನಲ್ಲಿ ಹತ್ಯೆ ಮಾಡಲಾಗಿತ್ತು.
ಗುರುವಾರ ಮಧ್ಯಪ್ರದೇಶದಲ್ಲಿ ಕಾಸ್ ದುಬೆಯನ್ನು ಬಂಧಿಸಲಾಗಿತ್ತು.

ಆತನನ್ನು ಶುಕ್ರವಾರ ಬೆಳಗ್ಗೆ ಉಜ್ಜುನಿುಂದ ಕಾನ್ಪುರಕ್ಕೆ ಪೊಲೀಸ್ ವಾಹನದಲ್ಲಿ ಕರೆದೊಯ್ಯುವಾಗ ಅಪಘಾತ ಸಂಭಸಿತ್ತು. ಆತ್ಮರಕ್ಷಣೆಗಾಗಿ ಎನ್‍ಕೌಂಟರ್ ಮಾಡಲಾಗಿದೆ ಎಂದು ಕಾನ್ಪುರ ಪೊಲೀಸರು ಸ್ಪಷ್ಟಪಡಿಸಿದ್ದರು.

ರಸ್ತೆಗೆ ಎಮ್ಮೆಗಳು ಅಡ್ಡಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದಿತ್ತು. ಆಗ ನಮ್ಮ ಸಿಬ್ಬಂದಿಯ ಬಳಿಯಿದ್ದ ಗನ್ ಕಿತ್ತುಕೊಂಡು ವಿಕಾಸ್ ದುಬೆ ಪರಾರಿಯಾಗಲು ಪ್ರಯತ್ನಿಸಿದ್ದ.

ಆಗ ಪೊಲೀಸರು ಆತನನ್ನು ಸುತ್ತುವರೆದು ಶರಣಾಗುವಂತೆ ಎಚ್ಚರಿಸಿದರಾದರೂ ಆತ ಪೊಲೀಸರ ಮೇಲೆ ಗುಂಡು ಹಾರಿಸಲು ಮುಂದಾಗಿದ್ದ. ಈ ವೇಳೆ ದುಬೆಯನ್ನು ಎನ್‍ಕೌಂಟರ್ ಮಾಡಿ ಕೊನೆಗೊಳಿಸಬೇಕಾಯಿತು ಎಂದು ಪೊಲೀಸರು ಹೇಳಿದ್ದರು.

Facebook Comments

Sri Raghav

Admin