ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡಗಳಿಗೆ ಭದ್ರತೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 12-ಆಡಳಿತ ಶಕ್ತಿ ಕೇಂದ್ರಗಳಾದ ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡಗಳ ಕಾರಿಡಾರ್‍ಗಳಲ್ಲಿ ಕಟ್ಟಡಗಳ ಭದ್ರತೆ, ಸುರಕ್ಷತೆ, ಸೌಂದರ್ಯಕ್ಕೆ ಧಕ್ಕೆಯಾಗುವ ರೀತಿ ಅನುಪಯುಕ್ತ ವಸ್ತುಗಳನ್ನು ಶೇಖರಿಸಿಡದಂತೆ ರಾಜ್ಯಸರ್ಕಾರ ಸೂಚಿಸಿದೆ.

ಈ ಮೂರೂ ಕಟ್ಟಡಗಳ ಸೌಂದರ್ಯ ಕಾಪಾಡುವುದು ಪ್ರತಿಯೊಬ್ಬ ನೌಕರರು, ಅಧಿಕಾರಿಯ ಕರ್ತವ್ಯವಾಗಿದ್ದು, ಕಾರಿಡಾರ್‍ಗಳಲ್ಲಿ ಅನುಪಯುಕ್ತ ಪೀಠೋಪಕರಣ, ಅಲ್ಮೆರಾ ಇತರೆ ವಸ್ತುಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಈಗಾಗಲೇ ಕಾರಿಡಾರ್‍ಗಳಲ್ಲಿ ಇಟ್ಟಿರುವ ವಸ್ತುಗಳನ್ನು ತೆರವುಗೊಳಿಸಬೇಕು.

ಇಲ್ಲದಿದ್ದರೆ ಆಯಾ ಶಾಖೆಯ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸುವುದಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೂಚಿಸಿದೆ.  ವಿಧಾನಸೌಧ ಕಟ್ಟಡವು ದೇಶದಲ್ಲೇ ಪ್ರಸಿದ್ಧ ಐತಿಹಾಸಿಕ ಕಟ್ಟಡವಾಗಿದ್ದು, ಅನೇಕ ಗಣ್ಯರು, ಪ್ರವಾಸಿಗರು ವೀಕ್ಷಣೆಗೆ ಆಗಮಿಸುತ್ತಿರುತ್ತಾರೆ. ಹೀಗಾಗಿ ಕಟ್ಟಡದ ಸೌಂದರ್ಯ ಹಾಗೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕಾಗಿದೆ ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಭಿತ್ತಿಪತ್ರಕ್ಕೆ ನಿರ್ಬಂಧ: ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡ, ವಿಶ್ವೇಶ್ವರಯ್ಯ ಕೇಂದ್ರ ಸೇರಿದಂತೆ ಸರ್ಕಾರದ ಪ್ರಮುಖ ಕಟ್ಟಡಗಳ ಗೋಡೆ ಮೇಲೆ ವರಾಂಡ ಲಿಫ್ಟ್‍ಗಳ ಮುಂಭಾಗದಲ್ಲಿ ನೋಟಿಸ್, ಸುತ್ತೋಲೆ, ಕರಪತ್ರಗಳು, ಸಾಂಸ್ಕøತಿಕ ಕಾರ್ಯಕ್ರಮಗಳ ಪತ್ರಗಳನ್ನು ಅಂಟಿಸಲಾಗುತ್ತಿದ್ದು, ಇದರಿಂದ ಕಟ್ಟಡಗಳ ಸೌಂದರ್ಯಕ್ಕೆ ಧಕ್ಕೆ ಉಂಟಾಗುತ್ತಿದೆ.

ಸೂಚನಾ ಫಲಕಗಳಲ್ಲಿ ಭಿತ್ತಿಪತ್ರಗಳನ್ನು ಹಾಕಬೇಕೆ ಹೊರತು ಎಲ್ಲೆಂದರಲ್ಲಿ ಭಿತ್ತಿಪತ್ರಗಳನ್ನು ಅಂಟಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶಿಸಿದೆ.

ಒಂದು ವೇಳೆ ನಿರ್ಲಕ್ಷ್ಯ ಮಾಡಿ ಭಿತ್ತಿಪತ್ರ ಅಂಟಿಸುವುದು ಮುಂದುವರಿದರೆ ಸಂಬಂಧಿಸಿದ ಸಂಸ್ಥೆಗಳು ಹಾಗೂ ವ್ಯಕ್ತಿಗಳ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಂಡು ಭಿತ್ತಿಪತ್ರ ತೆರೆವುಗೊಳಿಸಲು ಉಂಟಾಗುವ ನಷ್ಟವನ್ನು ಸಂಬಂಧಪಟ್ಟವರಿಂದಲೇ ಭರಿಸಲಾಗುವುದು ಎಂದು ಎಚ್ಚರಿಸಲಾಗಿದೆ.

Facebook Comments