ಮಹಿಳೆ ಮತ್ತು ಸ್ನೇಹಿತನ ತಲೆಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ, ಕಾರಣವೇನು ಗೊತ್ತೇ..?

ಈ ಸುದ್ದಿಯನ್ನು ಶೇರ್ ಮಾಡಿ

ಲಕ್ನೋ,ಆ.27- ಮಹಿಳೆ ಹಾಗೂ ಆತನ ಸ್ನೇಹಿತನ ಮೇಲೆ ಸಂಬಂಕರೇ ಹಲ್ಲೆ ನಡೆಸಿದ್ದು, ಇಬ್ಬರಿಗೂ ತಲೆಬೋಳಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿರುವ ಅಮಾನವೀಯ ಘಟನೆ ಉತ್ತರಪ್ರದೇಶದ ಕನೌಜ್ ಜಿಲ್ಲೆಯಲ್ಲಿ ನಡೆದಿದೆ.

ಎರಡು ತಿಂಗಳ ಹಿಂದೆಯಷ್ಟೇ ಈ ಮಹಿಳೆಯ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಸಂತ್ರಸ್ತೆಯಾಗಿದ್ದ ಆಕೆಗೆ ವಿಲಾಂಗಚೇತನನಾಗಿದ್ದ ಸ್ನೇಹಿತ ನೆರವು ನೀಡುತ್ತಿದ್ದ. ಆದರೆ ಮಹಿಳೆಯ ಕುಟುಂಬಸ್ಥರು ಈ ಬಗ್ಗೆ ಅಸಮಾಧಾನ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅಲ್ಲದೆ ಇವರ ಇಬ್ಬರ ಸ್ನೇಹ ಮಹಿಳೆಯ ಕುಟುಂಬಕ್ಕೆ ಇಷ್ಟವಿರಲಿಲ್ಲ. ಆದಾಗ್ಯೂ ಇವರಿಬ್ಬರು ಮಾತನಾಡುತ್ತಿದ್ದರು. ಇದರಿಂದ ಕುಪಿತಗೊಂಡ ಸಂಬಂಕರು ಈ ಇಬ್ಬರ ತಲೆ ಬೋಳಿಸಿ ಗ್ರಾಮದುದ್ದಕ್ಕೂ ಮೆರವಣಿಗೆ ಮಾಡಿದ್ದಾರೆ.

ಮಹಿಳೆ ಹಾಗೂ ವಿಕಲಾಂಗ ವ್ಯಕ್ತಿಯನ್ನು ಈ ರೀತಿ ಅವಮಾನಿಸಿರುವ ಆಕೆಯ ಸಂಬಂಕರು ಹಾಗೂ ಕೆಲವು ಗ್ರಾಮಸ್ಥರು ಸೇರಿದಂತೆ ಒಟ್ಟು 8 ಮಂದಿಯ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಉತ್ತರಪ್ರದೇಶದಲ್ಲಿ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಅತ್ಯಾಚಾರ ಸೇರಿದಂತೆ ಈ ರೀತಿಯ ಅವಮಾನೀಯ ಘಟನೆಗಳು ಅಗಾಗ್ಗೆ ನಡೆಯುತ್ತಲೇ ಇರುತ್ತದೆ.

Facebook Comments

Sri Raghav

Admin