ಕೊರೊನಾ ತಡೆಗೆ ಪ್ರಾಣಾಯಾಮ, ಕಷಾಯ ಪರಿಣಾಮಕಾರಿ : ವಿನಯ್ ಗುರೂಜಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.1-ಕೋವಿಡ್ ನಿಯಂತ್ರಿಸಲು ಲಸಿಕೆ ಒಂದೇ ಮಾರ್ಗವಲ್ಲ. ಪ್ರಾಣಾಯಾಮ ಮಾಡಬೇಕು ಎಂದು ಶ್ರೀ ವಿನಯ್ ಗುರೂಜಿ ತಿಳಿಸಿದರು.ಆರ್‍ಟಿನಗರದ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲೋಪತಿ ಒಂದೇ ಸತ್ಯವಲ್ಲ. ಹಾಗಾಗಿ ಕಷಾಯವನ್ನು ಸೇವಿಸಬೇಕು ಎಂದರು.

ಮುಖ್ಯಮಂತ್ರಿಗಳಿಗೆ ಶುಭ ಕೋರಲು ಬಂದಿದ್ದು, ಇದೊಂದು ಸೌಹಾರ್ದಯುತ ಭೇಟಿ ಅಷ್ಟೆ. ನನಗೆ ರಾಜಕೀಯ ಸಾಕಷ್ಟು ದೂರವಾಗಿದ್ದು, ರಾಜಕೀಯ ನಾಯಕರಿಗೆ ಸಲಹೆ ನೀಡಿದರೆ ತಮಾಷೆಯಾಗಲಿದೆ ಎಂದು ಹೇಳಿದರು.

ಬೊಮ್ಮಾಯಿ ಅವರು ಈ ಹಿಂದೆ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ಅವರ ತಂದೆ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರು ಸೂಕ್ತ ರೀತಿಯಲ್ಲಿ ತರಬೇತಿ ನೀಡಿರುತ್ತಾರೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನ ಅವರಿಗೆ ನಿಭಾಯಿಸುವುದು ಕಷ್ಟವಾಗುವುದಿಲ್ಲ ಎಂದು ಅವರು ತಿಳಿಸಿದರು.

Facebook Comments

Sri Raghav

Admin