ಚಿತ್ರೀಕರಣ ವೇಳೆ ‘ಮರಿ ಟೈಗರ್’ ವಿನೋದ್ ಪ್ರಭಾಕರ್‌ಗೆ ಗಾಯ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.3-ನಟ ವಿನೋದ್ ಪ್ರಭಾಕರ್ ಅವರು ಸಾಹಸದ ದೃಶ್ಯದ ಚಿತ್ರೀಕರಣದ ವೇಳೆ ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಾಗಡಿ ರಸ್ತೆಯಲ್ಲಿರುವ ಟಿಂಬರ್‍ಯಾರ್ಡ್‍ನಲ್ಲಿ ವರ್ಧ ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಉದಯ ಪ್ರಕಾಶ ನಿರ್ದೇಶನದ ಆ್ಯಕ್ಷನ್ ಚಿತ್ರದಲ್ಲಿ ವಿನೋದ್ ಪ್ರಭಾಕರ್ ನಟನಾಗಿ ಅಭಿನಯಿಸುತ್ತಿದ್ದು, ಇಂದು ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಬಿದ್ದು ಗಾಯಗೊಂಡಿದ್ದು, ಅವರ ಕಾಲಿನ ಮಂಡಿಗೆ ತೀವ್ರ ಪೆಟ್ಟಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin