ವಿರಾಟ್‍ಕೊಹ್ಲಿ ವರ್ಷದ ಕ್ರಿಕೆಟಿಗ

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ, ಮೇ 14- ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹಾಗೂ ಮಹಿಳಾ ತಂಡದ ಸದಸ್ಯೆ ಸ್ಮೃತಿ ಮಂದನಾ ವರ್ಷದ ಕ್ರಿಕೆಟಿಗರ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಭಾರತ ತಂಡದ ವೇಗದ ಬೌಲರ್ ಜಸ್‍ಪ್ರೀತ್ ಬೂಮ್ರಾ ಉತ್ತಮ ಬೌಲರ್ ಆಗಿ ಹೊರಹೊಮ್ಮಿದ್ದರೆ, ಚೇತೇಶ್ವರ ಪೂಜಾರ ಉತ್ತಮ ಟೆಸ್ಟ್ ಕ್ರಿಕೆಟಿಗ, ಐಪಿಎಲ್ ಚಾಂಪಿಯನ್ ನಾಯಕ ರೋಹಿತ್ ಶರ್ಮಾ ಏಕದಿನ ಆಟಗಾರ, ಆಸ್ಟ್ರೇಲಿಯಾದ ಆರೋನ್ ಫಿಂಚ್ ವರ್ಷದ ಶ್ರೇಷ್ಠ 20-20 ಆಟಗಾರರಾಗಿ ಗುರುತಿಸಿಕೊಂಡಿದ್ದಾರೆ.

ಭಾರತದ ಕುಲ್‍ದೀಪ್ ಯಾದವ್ ಉತ್ತಮ ಪ್ರದರ್ಶನಕ್ಕಾಗಿ ಹಾಗೂ ಆಫ್ಘಾನಿಸ್ಥಾನದ ರಶೀದ್‍ಕಾನ್ ಟ್ವೆಂಟಿ-20 ಬೌಲರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
1983ರಲ್ಲಿ ಕಪಿಲ್‍ದೇವ್ ಸಾರಥ್ಯದ ಭಾರತ ತಂಡವು ವಿಶ್ವಕಪ್ ಗೆಲ್ಲುವಲ್ಲಿ ಮಹತ್ತರ ಪಾತ್ರ ವಹಿಸಿದ ಮೊಹಿಂದರ್ ಅಮರ್‍ನಾಥ್ ಅವರಿಗೆ ಜೀವಮಾನ ಶ್ರೇಷ್ಠ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ