ರೋಷನ್ ಹೇಳಿಕೆಯಲ್ಲಿ ಸತ್ಯಾಂಶವಿದೆ : ಎಚ್.ವಿಶ್ವನಾಥ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 21- ಕಾಂಗ್ರೆಸ್ ನಾಯಕರ ಕುರಿತಂತೆ ಮಾಜಿ ಸಚಿವ ಆರ್.ರೋಷನ್ ಬೇಗ್ ನೀಡಿರುವ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಏನಾಗುತ್ತಿದೆ ಎಂಬುದನ್ನು ಅವರು ಆ ಪಕ್ಷದ ನಾಯಕರಾಗಿ ಹೇಳಿದ್ದಾರೆ.

ಈಗ ರಂಜಾನ್ ಹಬ್ಬದ ಮಾಸವಾಗಿರುವುದರಿಂದ ಅವರ ಹೇಳಿಕೆಯಲ್ಲಿ ವಾಸ್ತವವಿದೆ ಎನಿಸುತ್ತದೆ. ಅವರು ನೀಡಿರುವ ಹೇಳಿಕೆಯನ್ನು ತಾವು ಸ್ವಾಗತಿಸುವುದಾಗಿ ಹೇಳಿದರು.
ಕಾಂಗ್ರೆಸ್ ನಾಯಕರ ವಿರುದ್ಧ ರೋಷನ್ ಬೇಗ್ ಅವರು ಗಂಭೀರ ಆರೋಪ ಮಾಡಿರುವ ಬಗ್ಗೆ ವಿಶ್ವನಾಥ್ ಈ ರೀತಿ ಪ್ರತಿಕ್ರಿಯಿಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ