ಜ.16 ರಂದು ಪ್ರಕಟವಾಗಲಿದೆ ಅಂತಿಮ ಮತದಾರರ ಪಟ್ಟಿ

ಈ ಸುದ್ದಿಯನ್ನು ಶೇರ್ ಮಾಡಿ

Voter-List

ಬೆಂಗಳೂರು, ಜ. 5, : ಭಾರತ ಚುನಾವಣಾ ಆಯೋಗದ ನಿರ್ದೇಶನಗಳನ್ವಯ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮ -2019 ಕ್ಕೆ ಸಂಬಂಧಿಸಿದಂತೆ ಜನವರಿ 16 ರಂದು ಕರ್ನಾಟಕ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅಂತಿಮ ಮತದಾರರ ಪಟ್ಟಿಗಳ ಪ್ರತಿಗಳನ್ನು ಸಾರ್ವಜನಿಕರ ಹಾಗೂ ರಾಜಕೀಯ ಪಕ್ಷಗಳ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ, ಮತದಾರರ ನೋಂದಣಾಧಿಕಾರಿಗಳ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿ ಹಾಗೂ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆಗಳಲ್ಲಿ ಸಾರ್ವಜನಿಕರ ತಿಳುವಳಿಕೆಗಾಗಿ ಪ್ರಕಟಿಸಲಾಗುವುದು.

ಕರ್ನಾಟಕ ರಾಜ್ಯದ ಎಲ್ಲಾ 224 ವಿಧಾನಸಭ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಗಳನ್ನು ಮುಖ್ಯ ಚುನಾವಣಾಧಿಕಾರಿಗಳು ಕರ್ನಾಟಕ ರಾಜ್ಯ ಇವರ ಅಧಿಕೃತ ಜಾಲತಾಣ www.ceokarnataka.kar.nic.in  ನಲ್ಲಿ ಪಿ.ಡಿ.ಎಫ್ ಆವೃತ್ತಿಯನ್ನು ದಿನಾಂಕ: 16-01-2019 ರಂದು ಪ್ರಕಟಿಸಲಾಗುವುದು.

ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾದ ಬಗ್ಗೆ ಪರಿಶೀಲಿಸುವುದು ಸರಿಯಾದ ಹಾಗೂ ಹೆಸರನ್ನು ನಮೂದುಗಳೊಂದಿಗೆ ನೋಂದಾಯಿಸಿದ ಬಗ್ಗೆ ಖಚಿತಪಡಿಸಿಕೊಳ್ಳುವಂತೆ ಕೋರಲಾಗಿದೆ.

ಮತದಾರರ ಪಟ್ಟಿಗಳ ಅಂತಿಮ ಪ್ರಕಟಣೆಯ ತುರವಾಯ, ಹೊಸ ಸೇರ್ಪಡೆ, ತಿದ್ದುಪಡಿ ಮತ್ತು ಹೆಸರು ತೆಗೆದು ಹಾಕುವಿಕೆ ಪ್ರಕ್ರಿಯೆ ನಿರಂತರವಾಗಿ ಕೈಗೊಂಡು ಕಲೋಚಿತಗೊಳಿಸಲಾಗುವುದು ಎಂದು ಸಾರ್ವಜನಿಕರ ಗಮನಕ್ಕೆ ಈ ಮೂಲಕ ತರಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

Facebook Comments

Sri Raghav

Admin

Comments are closed.