ಮಂಡ್ಯ ಜಿಲ್ಲೆಯ ಬಳ್ಳೇಕೆರೆ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ

ಈ ಸುದ್ದಿಯನ್ನು ಶೇರ್ ಮಾಡಿ

Ballekere--01

ಮಂಡ್ಯ,ನ.2- ಮಂಡ್ಯ ಲೋಕಸಭಾ ಉಪಚುನಾವಣೆಗೆ ಕೆ.ಆರ್.ಪೇಟೆ ತಾಲ್ಲೂಕಿನ ಸಂತೇಬಾಚಹಳ್ಳಿ ಹೋಬಳಿಯಲ್ಲಿ ಮತಗಟ್ಟೆ ಸ್ಥಾಪಿಸುವಂತೆ ಮನವಿ ಮಾಡಿದ್ದರೂ ಕ್ರಮ ಕೈಗೊಳ್ಳದ ಕಾರಣ ಇಲ್ಲಿನ ಗ್ರಾಮಸ್ಥರು ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

ನಿನ್ನೆ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಮತದಾನಕ್ಕೆ ಸುಮಾರು 7 ಕಿ.ಮೀ ದೂರದ ಶ್ಯಾರಹಳ್ಳಿ ಗ್ರಾಮಕ್ಕೆ ಹೋಗಬೇಕಾಗಿದೆ. ಶ್ಯಾರಹಳ್ಳಿಗೆ ಹೋಗಲು ಸರಿಯಾದ ರಸ್ತೆ ವ್ಯವಸ್ಥೆ ಇಲ್ಲದ ಕಾರಣ ವಿಕಲಚೇತನರು, ವೃದ್ದರು ಮತದಾನಕ್ಕೆ ಹೋಗಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮತದಾನ ಬಹಿಷ್ಕರಿಸಲು ನಿರ್ಧರಿಸಿರುವುದಾಗಿ ತಿಳಿಸಿದರು.   ಗ್ರಾಮದಲ್ಲಿ ಸುಮಾರು 400 ಮತಗಳಿವೆ. ಹಾಗಾಗಿ ಪ್ರತ್ಯೇಕ ಮತಗಟ್ಟೆ ಸ್ಥಾಪಿಸುವವರೆಗೂ ಎಲ್ಲಾ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಪ್ರತಿಭಟನೆ ವೇಳೆ ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಗ್ರಾಮದ ಮುಖಂಡರಾದ ಗಣೇಶ್, ಅಂಕಪ್ಪ , ಕೆಂಪರಾಜು, ರಾಮಚಂದ್ರ, ಕಾಳೇಗೌಡ, ಮಹದೇವಮ್ಮ, ಲೋಕೇಶ್ ಸೇರಿದಂತೆ ನೂರಾರು ಮಂದಿ ಪಾಲ್ಗೊಂಡು ನಾಳಿನ ಉಪಚುನಾವಣೆಗೆ ಮತದಾನ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

# ಮೂಲಭೂತ ಸೌಲಭ್ಯ ಅಲಭ್ಯ: ಮತದಾನ ಬಹಿಷ್ಕಾರ
ಕೆ.ಆರ್.ನಗರ ತಾಲ್ಲೂಕಿನ ಬಾಚಹಳ್ಳಿ ಗ್ರಾಮದಲ್ಲಿ ಸೂಕ್ತ ಮೂಲಭೂತ ಸೌಕರ್ಯ ಇಲ್ಲದ ಕಾರಣ ಇಲ್ಲಿನ ಗ್ರಾಮಸ್ಥರು ನಾಳಿನ ಮತದಾನವನ್ನು ಬಹಿಷ್ಕರಿಸುವುದಾಗಿ ಇನ್‍ಸ್ಪೆಕ್ಟರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.   ಬಾಚಹಳ್ಳಿ ಗ್ರಾಮದಲ್ಲಿನ ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಹೀಗಾಗಿ ನಾಳಿನ ಮತದಾನವನ್ನು ಬಹಿಷ್ಕರಿಸಲು ನಿರ್ಧರಿಸಿರುವುದಾಗಿ ಇಲ್ಲಿನ ಗ್ರಾಮಸ್ಥರು ಮನವಿ ಪತ್ರ ಸಲ್ಲಿಸಿದ್ದಾರೆ.

Facebook Comments