ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥರಾಗಿ ಉಗ್ರಪ್ಪ ನೇಮಕ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.20- ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರನ್ನು ಕೆಪಿಸಿಸಿಯ ಮಾಧ್ಯಮ ವಿಭಾಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕೆಪಿಸಿಸಿಯ ಮಾಧ್ಯಮ ವಿಭಾಗಕ್ಕೆ ಈವರೆಗೂ ವಿಧಾನಪರಿಷತ್ ಸದಸ್ಯ ರಿಜ್ವಾನ್ ಅರ್ಷದ್ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು.

ಆದರೆ, ಅವರು ಹೆಚ್ಚು ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳದ ಹಿನ್ನೆಲೆಯಲ್ಲಿ ಹುದ್ದೆಯಿಂದ ತೆಗೆದು ಹಾಕಿದ್ದು, ವಿ.ಎಸ್.ಉಗ್ರಪ್ಪ ಅವರನ್ನು ನೇಮಿಸಲಾಗಿದೆ. ಈವರೆಗೂ ಕೆಪಿಸಿಸಿ ವಕ್ತಾರರಾಗಿ ಉಗ್ರಪ್ಪ ಕೆಲಸ ಮಾಡುತ್ತಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ