ಜಡಿ ಮಳೆಯಿಂದ ಕುಸಿದ ಗೋಡೆ, ದಂಪತಿ ಸ್ಥಳದಲ್ಲೇ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಚಿತ್ರದುರ್ಗ, ನ.14- ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಜಡಿ ಮಳೆಯಿಂದ ಗೋಡೆ ಕುಸಿದು ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಿರಿಯೂರು ತಾಲ್ಲೂಕಿನ ಕಾರೋಬನಹಟ್ಟಿ ಗ್ರಾಮದಲ್ಲಿ ನಡೆದಿದೆ.
ಚನ್ನಕೇಶವ (26), ಸೌಮ್ಯ (20) ಮೃತಪಟ್ಟ ದಂಪತಿ.

ಹಳೆ ಮನೆಯಲ್ಲಿ ಮೃತ ದಂಪತಿ ಹಾಗೂ ಚನ್ನಕೇಶವ ಅವರ ತಂದೆ ಪ್ರತ್ಯೇಕವಾಗಿ ವಾಸವಾಗಿದ್ದು , ಕಳೆದ ಕೆಲ ದಿನಗಳಿಂದ ಜಡಿ ಮಳೆ ಸುರಿಯುತ್ತಿದ್ದು , ಹಳೆ ಮನೆಯಾದ್ದರಿಂದ ಗೋಡೆಗೆ ನೀರು ಇಳಿದು ತಡರಾತ್ರಿ ದಂಪತಿ ಮೇಲೆ ಕುಸಿದು ಬಿದ್ದು ಉಸಿರುಗಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ತಂದೆಗೆ ಗಂಭೀರವಾದ ಗಾಯಗಳಾಗಿದ್ದು , ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಐಮಂಗಲ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಿದ್ದಾರೆ.

Facebook Comments

Sri Raghav

Admin