ಮನೆ ಗೋಡೆ ಕುಸಿದ ಇಬ್ಬರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಅಫ್ಜಲ್‍ಪುರ, ಅ.27- ದಾರಿಯಲ್ಲಿ ಹೋಗುತ್ತಿದ್ದ ಇಬ್ಬರ ಮೇಲೆ ಮನೆ ಗೋಡೆ ಕುಸಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅಫ್ಜಲ್‍ಪುರ ತಾಲ್ಲೂಕಿನ ದಿಕ್ಸಂಗ ಕೆ.ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ಕಾವೇರಿ (20), ದಿವ್ಯಶ್ರೀ (5) ಮೃತಪಟ್ಟ ದುರ್ದೈವಿ.

ಭಾರೀ ಮಳೆಗೆ ಶಿಥಿಲಗೊಂಡಿದ್ದ ಮನೆಗೋಡೆ ಕುಸಿಯುತ್ತಿರುವ ಸಂದರ್ಭದಲ್ಲಿ ಅದೇ ದಾರಿಯಲ್ಲಿ ಹೋಗುತ್ತಿದ್ದ ಇವರಿಬ್ಬರ ಮೇಲೆ ಗೋಡೆ ಬಿದ್ದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಫ್ಜಲ್‍ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments