ಧರ್ಮಸ್ಥಳದಲ್ಲಿ ನೀರಿನ ಸಮಸ್ಯೆ ಕುರಿತು ಹೆಗ್ಗಡೆಯವರ ಜೊತೆ ಸಿಎಸ್ ಚರ್ಚೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 20- ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ತೀವ್ರ ಅಭಾವ ತಲೆದೋರಿರುವ ಕುರಿತು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರವಾಗಿ ಪರಿಗಣಿಸಿದ್ದು, ಅವರ ಸಲಹೆಯಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಸರ್ಕಾರದ ಕಳಕಳಿಗೆ ಕೃತಜ್ಞತೆ ವ್ಯಕ್ತಪಡಿಸಿದ ಶ್ರೀ ಹೆಗ್ಗಡೆಯವರು ಇನ್ನೊಂದು ಚೆಕ್‍ಡ್ಯಾಂ ನಿರ್ಮಾಣದ ಅಗತ್ಯವಿದೆ ಎಂದು ತಿಳಿಸಿದರು.

ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಗಳ ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆಗಾಗಿ ಇಂದು ಸಂಜೆ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಧರ್ಮಸ್ಥಳದಲ್ಲಿ ನೀರಿನ ಅಭಾವ ಹೆಚ್ಚಾಗಿರುವುದರಿಂದ ಭಕ್ತರು ಕೆಲ ದಿನಗಳ ಕಾಲ ತಮ್ಮ ಪ್ರವಾಸವನ್ನು ಮುಂದೂಡುವಂತೆ ಕಳೆದ ಕೆಲ ದಿನಗಳ ಹಿಂದಷ್ಟೇ ವೀರೇಂದ್ರ  ಹೆಗ್ಗಡೆಯವರು ಮನವಿ ಮಾಡಿಕೊಂಡಿದ್ದರು.

ಇದರ ಬೆನ್ನಲ್ಲೇ ರಾಜ್ಯದ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸ್ಥಳ ಪರಿಶೀಲನೆಗೆ ಮುಂದಾಗಿದ್ದಾರೆ. ಮಳೆ ಕೊರತೆಯಿಂದ ನೇತ್ರವಾತಿ ನದಿಯ ನೀರಿನ ಪ್ರಮಾಣ ತೀರಾ ತಳಮಟ್ಟಕ್ಕಿಳಿದಿದ್ದು ಧರ್ಮಸ್ಥಳದಲ್ಲಿ ನೀರಿನ ಅಭಾವ ಹೆಚ್ಚಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin