ಮಾಸ್ಕ್ ದಂಡದ ಪ್ರಮಾಣ ಹೆಚ್ಚಿಸಲು ಸರ್ಕಾರ ನಿರ್ಧಾರ…!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಏ.9- ಕೆಲವರು ಉದ್ದೇಶಪೂರ್ವಕವಾಗಿ ಮಾಸ್ಕ್ ಧರಿಸದೆ ನಿಯಮ ಉಲ್ಲಂಘನೆ ಮಾಡುತ್ತಿರುವ ಕಾರಣ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲು ಸರ್ಕಾರ ಆಲೋಚಿಸಿದೆ.  ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಯೊಬ್ಬರೂ ಮಾಸ್ಕ್ ಧರಿಸದಿದ್ದರೆ ಈಗಿರುವ ದಂಡದ ಪ್ರಮಾಣವನ್ನು ಪರಿಷ್ಕರಿಸುವ ಬಗ್ಗೆ ನಿನ್ನೆ ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಸ್ತುತ ನಗರಪ್ರದೇಶದಲ್ಲಿ ಯಾವುದೇ ವ್ಯಕ್ತಿ ಮಾಸ್ಕ್ ಧರಿಸದಿದ್ದರೆ 250 ರೂ. ಹಾಗೂ ಗ್ರಾಮೀಣ ಭಾಗಗಳಲ್ಲಿ 100 ರೂ. ದಂಡವನ್ನು ಹಾಕಲಾಗುತ್ತಿತ್ತು. ಆದರೆ ಸಾರ್ವಜನಿಕರು ಇದರ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ಬೆಂಗಳೂರು ಸೇರಿದಂತೆ ನಗರ ಭಾಗಗಳಲ್ಲಿ ಮಾಸ್ಕ್ ಹಾಕದಿದ್ದರೆ 350 ರೂ. ಹಾಗೂ ಗ್ರಾಮೀಣ ಭಾಗಗಳಲ್ಲಿ 200 ರೂ. ದಂಡ ಹಾಕಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ.

Related Stories :
* ನಾಳೆಯಿಂದ ಕೊರೊನಾ ಕಫ್ರ್ಯೂ : ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಕಂಪ್ಲಿಟ್ ಡಿಟೇಲ್ಸ್..!
* 24 ಗಂಟೆಯಲ್ಲಿ 1.31 ಲಕ್ಷ ಮಂದಿಗೆ ಪಾಸಿಟಿವ್, 780 ಸಾವು..! ಭಾರತ ಈಗ ಕೊರೋನಾ ಹಾಟ್‌ಸ್ಪಾಟ್.!

ಇಂದು ಸಂಜೆ ಸರ್ಕಾರದಿಂದ ಪರಿಷ್ಕøತ ಆದೇಶ ಹೊರಬೀಳಲಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ. ಈ ಹಿಂದೆಯೇ ಮಾಸ್ಕ್ ಧರಿಸದಿದ್ದರೆ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಬೇಕೆಂಬ ಪ್ರಸ್ತಾಪ ಸರ್ಕಾರದ ಮುಂದಿತ್ತು. ಆದರೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗಿದ್ದರಿಂದ ನಗರ ಪ್ರದೇಶಗಳಿಗೆ 250 ಹಾಗೂ ಗ್ರಾಮೀಣ ಭಾಗಗಳಲ್ಲಿ 100 ದಂಡ ಹಾಕುವ ನಿಯಮವನ್ನು ಜಾರಿ ಮಾಡಿತ್ತು.

Facebook Comments