ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಸೋಮೆನ್ ಮಿತ್ರ ವಿಧಿವಶ

ಈ ಸುದ್ದಿಯನ್ನು ಶೇರ್ ಮಾಡಿ

ಕೊಲ್ಕತ್ತಾ, ಜು.30- ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಸೋಮೆನ್ ಮಿತ್ರ (78) ಇಂದು ಮುಂಜಾನೆ ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು.

ಹೃದ್ರೋಗ ಮತ್ತು ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಅವರು ಕಳೆದ 17 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ನಸುಕಿನಲ್ಲಿ ಹೃದಯಾಘಾತದಿಂದ ಮಿತ್ರ ಕೊನೆಯುಸಿರೆಳೆದರು.

ಪಶ್ಚಿಮ ಬಂಗಾಳದ ಕಾಂಗ್ರೆಸ್ ವಿಭಜನೆಯಾಗುವುದನ್ನು ತಡೆಗಟ್ಟುವಲ್ಲಿ ವಿಫಲಾಗಿದ್ದ ಅವರು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷ ಸ್ಥಾಪನೆಗೆ ಪರೋಕ್ಷವಾಗಿ ಕಾರಣರಾಗಿದ್ದರು.

ಸೋಮೆನ್ ಮಿತ್ರ ನಿಧನಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮುಖಂಡ ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Facebook Comments

Sri Raghav

Admin