ಬೆಂಗಳೂರಲ್ಲಿ ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಲೆತ್ನಿಸಿದ ಪತಿ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಏ.21-ಪತ್ನಿಯನ್ನು ಪತಿಯೇ ಕೊಲೆ ಮಾಡಿರುವ ಘಟನೆ ರಾತ್ರಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದೊಡ್ಡತೇಗೂರಿನ ಮುನಿಸ್ವಾಮಪ್ಪ ಕಟ್ಟಡದಲ್ಲಿ ವಾಸವಾಗಿದ್ದ ಪ್ರಿಯಾಂಕ(24) ಕೊಲೆಯಾಗಿರುವ ಗಾರ್ಮೆಂಟ್ಸ್ ಉದ್ಯೋಗಿ.

ಕಳೆದ 7 ವರ್ಷಗಳ ಹಿಂದೆ ರಮೇಶ್‍ಬಾಬು ಎಂಬಾತನೊಂದಿಗೆ ಪ್ರಿಯಾಂಕ ವಿವಾಹವಾಗಿದ್ದು, ದಂಪತಿಗೆ ಒಂದು ಹೆಣ್ಣುಮಗುವಿದೆ. ಇವರು ಮೂಲತಃ ಆಂಧ್ರಪ್ರದೇಶದವರು.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ರಮೇಶ್ ಬಾಬು ಮತ್ತು ಪ್ರಿಯಾಂಕಾಗೂ ಕೌಟುಂಬಿಕ ವಿಷಯದಲ್ಲಿ ಪ್ರತಿದಿನ ಜಗಳ ನಡೆಯುತ್ತಿತ್ತು ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.

ನಿನ್ನೆ ರಾತ್ರಿ ದಂಪತಿ ನಡುವೆ ಜಗಳ ನಡೆದಿದ್ದು, ರಮೇಶ್ ಬಾಬು ಪತ್ನಿಯ ಕುತ್ತಿಗೆ ಹಿಸುಕಿ, ಮೂಗಿಗೆ ಗುದ್ದಿ, ತಲೆಗೆ ಹೊಡೆದು ಕೊಲೆ ಮಾಡಿ ನಂತರ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ್ದಾನೆ.

ಸುದ್ದಿ ತಿಳಿದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಮೊಕದ್ದಮೆ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.  ನಮ್ಮ ಅಕ್ಕನನ್ನು ಮಾವನೇ ಕೊಲೆ ಮಾಡಿದ್ದಾನೆ ಎಂದು ಪ್ರಿಯಾಂಕಾಳ ತಮ್ಮ ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಗೆ ದೂರು ನೀಡಿದ್ದಾನೆ.  ರಮೇಶ್ ಬಾಬುನನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin