ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.18- ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ಮೂಲದ ರೋಜಾ ಕೊಲೆಯಾದ ದುರ್ದೈವಿಯಾಗಿದ್ದು , ಆಕೆಯ ಪತಿ ಮಂಜುನಾಥ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಕಳೆದ ನಾಲ್ಕು ವರ್ಷಗಳ ಹಿಂದೆ ಕನಕಪುರದ ಮಂಜುನಾಥ್- ರೋಜಾ ಅವರ ಮದುವೆಯಾಗಿತ್ತು. ಕ್ಷುಲ್ಲಕ ವಿಚಾರಕ್ಕಾಗಿ ಇತ್ತೀಚೆಗೆ ದಂಪತಿ ನಡುವೆ ಜಗಳವಾಗುತ್ತಿತ್ತು. ನಿನ್ನೆ ಮಧ್ಯಾಹ್ನ ಮತ್ತೆ ಜಗಳ ನಡೆದು ಪತ್ನಿಯನ್ನು ಕತ್ತು ಹಿಸುಕಿ ಕೊಂದು ಪತಿ ಮಂಜುನಾಥ್ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಅಕ್ಕ ಪಕ್ಕದ ಮನೆಯವರು ಸಂಜೆ ಏನಾಯಿತು ಎಂದು ಮನೆಯ ಬಳಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮೃತ ದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಬ್ಯಾಡರಹಳ್ಳಿ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Facebook Comments