ಕಾಡು ಪ್ರಾಣಿಗಳ ಹಾವಳಿ ತಡೆಗೆ ಬ್ಯಾರಿಕೇಡ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.24- ರಾಜ್ಯದಲ್ಲಿ ಹೆಚ್ಚುತ್ತಿರುವ ಕಾಡುಪ್ರಾಣಿಗಳ ಹಾವಳಿ ತಡೆಗೆ ರೈಲ್ವೆ ಬ್ಯಾರಿಕೇಡ್ ಅಳವಡಿಸುವ ಸಂಬಂಧ ಶೀಘ್ರದಲ್ಲೇ ಕೇಂದ್ರ ಸಚಿವರನ್ನು ಭೇಟಿಯಾಗಿ ಸಮಸ್ಯೆಯನ್ನು ಇತ್ಯರ್ಥಪಡಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಆಶ್ವಾಸನೆ ಕೊಟ್ಟರು. ಮಲ್ಲೇಶ್ವರಂನಲ್ಲಿರುವ ಅರಣ್ಯಭವನದಲ್ಲಿ ಇಂದು ನಡೆದ ಅರಣ್ಯ ಸಂರಕ್ಷಣಾಧಿಕಾರಿ, ಸಂರಕ್ಷಣಾಧಿಕಾರಿಗಳು, ಪ್ರಾದೇಶಿಕ ವನ್ಯಜೀವಿ ವಿಭಾಗದ ಉಪಸಂರಕ್ಷಣಾಧಿಕಾರಿಗಳಿಗೆ ಆಯೋಜಿಸಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಕಾಡುಪ್ರಾಣಿಗಳನ್ನು ತಡೆಗಟ್ಟುವುದು ಅತ್ಯಗತ್ಯವಾಗಿದೆ. ಈ ಬಗ್ಗೆ ಕೇಂದ್ರಕ್ಕೆ ಹಲವು ಬಾರಿ ಮನವಿ ಮಾಡಿಕೊಂಡರೂ ನಮಗೆ ಅನುಮತಿ ನೀಡಿಲ್ಲ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿಯವರು ಸಿಎಂ ಗಮನಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಬಿಎಸ್‍ವೈ ಅವರು, ಕಾಡುಪ್ರಾಣಿಗಳು ಮತ್ತು ಮನುಷ್ಯನ ನಡುವೆ ಆಗಾಗ್ಗೆ ಸಂಘರ್ಷ ನಡೆದು ಅನಾಹುತ ನಡೆಯುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಶೀಘರದಲ್ಲೇ ದನ್ನು ಇತ್ಯರ್ಥಪಡಿಸುವುದಾಗಿ ಭರವಸೆ ನೀಡಿದರು.

ನಮ್ಮ ಸರ್ಕಾರ ಅರಣ್ಯ ಸಂರಕ್ಷಣೆಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ದೇಶದ ನಿಸರ್ಗ ಅರಣ್ಯ ರಕ್ಷಣೆ ಮಾಡುವುದು ನಮ್ಮ ನಿಮ್ಮ ಮೇಲೆ ಇದೆ. ಅಧಿಕಾರಿಗಳು, ಅರಣ್ಯ ವಾಸಿಗಳ ಜೊತೆ ಸೌಹಾರ್ದ ಯುತವಾಗಿ ಇರಬೇಕೆಂದು ಸಲಹೆ ಮಾಡಿದರು. ಇವರ ಜೊತೆ ಅನ್ಯೋನ್ಯವಾದ ಸಂಬಂಧ ಇದ್ರೆ ಮಾತ್ರ ಅರಣ್ಯ ರಕ್ಷಣೆ ಸಾಧ್ಯ. ಬೇಸಿಗೆ ಆರಂಭವಾಗುತ್ತಿದೆ. ಸ್ವಲ್ಪ ಬೆಂಕಿ ಬಿದ್ದರೂ ಇಡೀ ಅರಣ್ಯ ನಾಶ ಆಗುತ್ತದೆ. ಹೀಗಾಗಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ಕೊಟ್ಟರು.

ಕಾಡಿನಲ್ಲಿ ಪ್ರಾಣಿಗಳಿಗೂ ಉತ್ತಮ ಆಹಾರ ವ್ಯವಸ್ಥೆ ಮಾಡಬೇಕು. ಹಣಕಾಸಿನ ಇತಿಮಿತಿ ಒಳಗೆ ಏನೇನೋ ಮಾಡೋಕೆ ಸಾಧ್ಯನೋ ಅದನ್ನು ಇಲಾಖೆಯಲ್ಲಿ ಮಾಡಿ ಕೊಡ್ತೇನೆ. ರಣ್ಯ ಉಳಿಸಿಬೆಳೆಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಎಲ್ಲರೂ ಶ್ರಮವಹಿಸಬೇಕೆಂದು ಸೂಚಿಸಿದರು. ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವ್ಡೇಕರ್‍ಗೆ ಗಮನ ತಂದಿದ್ದೇವೆ. ಆದರೂ ಕೂಡ ಅವರು ಇನ್ನೂ ಒಪ್ಪಿಗೆ ಕೊಟ್ಟಿಲ್ಲ. ಹೀಗಾಗಿ ಶೀಘ್ರವೇ ನಿಮ್ಮ ಅಧ್ಯಕ್ಷತೆಯಲ್ಲಿ ಮತ್ತೊಮ್ಮೆ ಸಭೆ ನಡೆಸಬೇಕೆಂದು ಮನವಿ ಮಾಡಿದರು.

ಕಾಡು ಪ್ರಾಣಿಗಳು ಹಾಗೂ ಮನುಷ್ಯನ ನಡುವೆ ಸಂಘರ್ಷ ಹೆಚ್ಚಾಗುತ್ತಿರುವ ಕಾರಣ ಶೀಘ್ರವೇ ಪ್ರಾಣಿಗಳ ಹಾವಳಿಗೆ ಒಳಗಾದ ಕ್ಷೇತ್ರಗಳ ಶಾಸಕರ ಜೊತೆ ಸಭೆ ಕರೆಯಲಾಗುವುದು. ಸಭೆಯಲ್ಲಿ ಜಮೀನುಗಳ ಮೇಲಿನ ಕಾಡು ಪ್ರಾಣಿಗಳ ದಾಳಿ ತಡೆಯುವ ಬಗ್ಗೆ ಚರ್ಚಿಸಲಾಗುವುದು ಎಂದರು.

Facebook Comments