ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಬದಲಾವಣೆಯ ಮುನ್ಸೂಚನೆ ನೀಡಿದ ಅಮಿತ್ ಷಾ

ಈ ಸುದ್ದಿಯನ್ನು ಶೇರ್ ಮಾಡಿ

ಗಿರಿಧಿ( ಜಾರ್ಖಂಡ್), ಡಿ. 15- ಈಶಾನ್ಯ ರಾಜ್ಯಗಳೂ ಸೇರಿದಂತೆ ದೇಶದ ವಿವಿಧೆಡೆ ಹಿಂಸಾತ್ಮಕ ಪ್ರತಿಭಟನೆಗಳಿಗೆ ಕಾರಣವಾಗಿರುವ ವಿವಾದಿತ ಪೌರತ್ವ (ತಿದ್ದುಪಡಿ) ಕಾಯ್ದೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮುನ್ಸೂಚನೆ ನೀಡಿದ್ದಾರೆ.

ಜಾರ್ಖಂಡ್‍ನ ಗಿರಿಧಿಯಲ್ಲಿ ನಿನ್ನೆ ಸಂಜೆ ನಾಲ್ಕನೇ ಹಂತದ ಚುನಾವಣಾ ಪ್ರಚಾರ ರ್ಯಾಲಿಯೊಂದರಲ್ಲಿ ಮಾತನಾಡಿದ ಅವರು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕುರಿತು ಚರ್ಚಿಸಲಾಗುವುದು, ಇದರಲ್ಲಿ ಕೆಲವು ಮಾರ್ಪಾಡುಗಳು ಆಗಲಿದೆ ಎಂದು ತಿಳಿಸಿದರು.

ಈಶಾನ್ಯ ಪ್ರಾಂತ್ಯದ ರಾಜ್ಯಗಳಲ್ಲಿ ಹಿಂಸಾಚಾರ ಭುಗಿಲೇಳಲು ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳು ಕುಮ್ಮಕ್ಕು ನೀಡಿವೆ ಎಂದು ಗೃಹ ಸಚಿವರು ಆರೋಪಿಸಿದರು. ಈ ಕಾಯ್ದೆಯಿಂದ ಅಸ್ಸಾಂ ಮತ್ತು ಈಶಾನ್ಯ ರಾಜ್ಯಗಳ ಜನರು ಆತಂಕಕ್ಕೆ ಒಳಗಾಗಬೇಕಿಲ್ಲ. ಅವರ ಸಂಸ್ಕøತಿ, ಭಾಷೆ, ಸಾಮಾಜಿಕ ಅಸ್ತಿತ್ವ ಮತ್ತು ಕಾನೂನುಬದ್ಧ ಹಕ್ಕುಗಳನ್ನು ರಕ್ಷಿಸಲು ಸರ್ಕಾರ ಬದ್ದವಾಗಿದೆ.

ಈ ಅಧಿನಿಯಮದಿಂದ ಈ ಪ್ರಾಂತ್ಯದ ಜನರ ಮೇಲೆ ಯಾವುದೇ ದುಷ್ಪರಿಣಾಮ ಬೀರುವುದಿಲ್ಲ ಎಂದು ಅವರು ಅಭಯ ನೀಡಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂಧ್ರ ಸರ್ಕಾರವು ಈಶಾನ್ಯ ಪ್ರಾಂತ್ಯದ ಎಲ್ಲ ಎಂಟು ರಾಜ್ಯಗಳ ಹಿತಾಸಕ್ತಿ ಮತ್ತು ಅವರ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿದೆ.

ಆದರೆ ಕಾಂಗ್ರೆಸ್ ಕುಮ್ಮಕ್ಕಿನಿಂದಾಗಿ ಆ ಪ್ರಾಂತ್ಯದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿವೆ. ಆನರು ಪ್ರತಿಭಟನೆಗಳನ್ನು ಕೈಬಿಟ್ಟು ಶಾಂತಿ ನೆಲೆಸಲು ಸಹಕರಿಸಬೇಕೆಂದು ಅವರು ಮನವಿ ಮಾಡಿದರು.

Facebook Comments

Sri Raghav

Admin