ಡಿ. 7ರಿಂದ 15ರವರೆಗೆ ವಿಧಾನಸೌಧದಲ್ಲೇ ಚಳಿಗಾಲದ ಅಧಿವೇಶನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.18- ಈ ಬಾರಿಯ ಚಳಿಗಾಲದ ಅಧಿವೇಶನವು ಡಿಸೆಂಬರ್ 7ರಿಂದ 15ರವರೆಗೆ ಬೆಂಗಳೂರಿನಲ್ಲೇ ನಡೆಯಲಿದೆ.  ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಯಿತು.  ಸಾಮಾನ್ಯವಾಗಿ ಚಳಿಗಾಲದ ಅಧಿವೇಶನವು ಬೆಳಗಾವಿಯ ಸುವರ್ಣ ಸೌಧದಲ್ಲಿ 10 ದಿನಗಳ ಕಾಲ ನಡೆಯುತ್ತಿತ್ತು. ಆದರೆ ಕಳೆದ ಎರಡು ವರ್ಷಗಳಿಂದ ಬೆಂಗಳೂರಿನಲ್ಲೇ ನಡೆಯುತ್ತಿದೆ.

ಡಿಸೆಂಬರ್ 7ರಿಂದ 15ರವರೆಗೆ ಚಳಿಗಾಲದ ಅಧಿವೇಶನವನ್ನು ಬೆಂಗಳೂರಿನಲ್ಲೇ ನಡೆಸಲು ಸಂಪುಟ ಅನುಮೋದನೆ ನೀಡಿದೆ. ಕೋವಿಡ್ ಹಿನ್ನೆಲೆಯಲ್ಲಿ ಬೆಳಗಾವಿಗೆ ಬದಲು ಬೆಂಗಳೂರಿನಲ್ಲೇ ನಡೆಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವ ಮಾಧುಸ್ವಾಮಿ ಅವರು ಶಾಸನ ಸಭೆಯ ನಿಯಮದಂತೆ ನವೆಂಬರ್-ಡಿಸೆಂಬರ್ ಮಧ್ಯ ಭಾಗದಲ್ಲಿ ಚಳಿಗಾಲದ ಅಧಿವೇಶನ ನಡೆಸಬೇಕು. ಇದರಂತೆ ಡಿ.7ರಿಂದ 15ರವರೆಗೆ ನಡೆಸಲಾಗುವುದು ಎಂದರು.  ಇನ್ನು 2021ನೇ ಸಾಲಿನಲ್ಲಿ 21 ಸಾರ್ವತ್ರಿಕ ರಜೆ ಹಾಗೂ 19 ಪರಿಮಿತಿ ರಜೆಗಳನ್ನು ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ.

Facebook Comments