ಪೂಜೆ ವೇಳೆ ಸೀರೆಗೆ ತಗುಲಿದ ಬೆಂಕಿ ಮಹಿಳೆ ಸ್ಥಿತಿ ಗಂಭೀರ..! (Video)

ಈ ಸುದ್ದಿಯನ್ನು ಶೇರ್ ಮಾಡಿ

ಹುಬ್ಬಳ್ಳಿ,ಜೂ 20- ಕಾರಹುಣ್ಣಿಮೆಯ ದಿನದಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ನಾಗರಕಟ್ಟೆಗೆ ಪೂಜೆ ಮಾಡುತ್ತಿದ್ದ ವೇಳೆ ಮಹಿಳೆಯ ಸೀರೆಗೆ ದೀಪದ ಬೆಂಕಿ ತಗುಲಿ ಇಡೀ ದೇಹವನ್ನೇ ಆವರಿಸಿ ಆಕೆ ತೀವ್ರವಾಗಿ ಗಾಯ ಗೊಂಡಿರುವ ಘಟನೆ ಹುಬ್ಬಳ್ಳಿಯ ವಿಶ್ವೇಶ್ವರ ನಗರದಲ್ಲಿ ನಡೆದಿದೆ.

ಈ ಘಟನೆ ಜೂನ್ 17ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಂದು ದೇವಸ್ಥಾನಕ್ಕೆ ತೆರಳಿದ್ದ ಮಹಿಳೆ ದೇವಸ್ಥಾನದಲ್ಲಿರುವ ನಾಗರಕಟ್ಟೆಗೆ ಬಾಗಿ ನಮಸ್ಕರಿಸಿ ಹಿಂದಿರುಗುತ್ತಿದ್ದ ವೇಳೆ ಸೀರೆಗೆ ಬೆಂಕಿ ಹೊತ್ತಿಕೊಂಡಿದೆ. ಈ ಎಲ್ಲಾ ದೃಶ್ಯಗಳು ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸೀರೆಯ ಅಂಚಿಗೆ  ಹೊತ್ತಿಕೊಂಡಿ ಬೆಂಕಿ ಕ್ಷಣಾರ್ಧದಲ್ಲಿ ಬೆಂಕಿ ಮೈಗೆಲ್ಲ ಆವರಿಸಿದ ಮಹಿಳೆ ನರಳಿದ್ದಾರೆ.  ಮೈಗೆ ಬೆಂಕಿ ತಗುಲುತ್ತಿದ್ದಂತೆ ಮಹಿಳೆ ದೇವಸ್ಥಾನದೊಳಗೆ ಓಡಿದ್ದಾಳೆ. ತಕ್ಷಣ ಸ್ಥಳದಲ್ಲಿ ಜಮಾಯಿಸಿ ಸಾರ್ವಜನಿಕರು ಬೆಂಕಿ ನಂದಿಸಿದ್ದಾರೆ. ಈ ಭಯಾನಕ ದೃಶ್ಯ ವಿಶ್ವನಾಥ ದೇವಸ್ಥಾನದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗಾಯಗೊಂಡ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ವಿಡಿಯೋದಲ್ಲೇನಿದೆ..? : ಮಹಿಳೆ ದೇವರಿಗೆ ಕೈ ಮುಗಿದು ಹಿಂದಿರುಗುತ್ತಿದ್ದರು. ಈ ವೇಳೆ ಏಕಾಏಕಿ ಅವರ ಸೀರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಮಹಿಳೆ ಕಿರುಚಾಡುತ್ತಾ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಮಹಿಳೆಯ ಚೀರಾಟ ಕೇಳಿದ ಸ್ಥಳದಲ್ಲಿರುವ ತಕ್ಷಣವೇ ಮಹಿಳೆಯ ಬಳಿ ಓಡಿ ಬಂದು, ಕಷ್ಟಪಟ್ಟು ಬೆಂಕಿ ನಂದಿಸಿದ್ದಾರೆ. ನಂತರ ಮಹಿಳೆಯನ್ನು ನಗರದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ