ಮಹಿಳೆ ಮೇಲೆ ಗುಂಡಿನ ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

ಮಳವಳ್ಳಿ, ಅ.9-ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ನಾಡ ಬಂದೂಕಿನಿಂದ ಗುಂಡು ಹಾರಿಸಿ ಪರಾರಿಯಾಗಿ ರುವ ಘಟನೆ ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಾಣಾಳು ಗ್ರಾಮದ ನಿವಾಸಿ ರಾಜಮ್ಮ (34) ಗುಂಡೇಟಿನಿಂದ ಗಂಭೀರ ಗಾಯಗೊಂಡಿರುವ ಮಹಿಳೆ.

ನಿನ್ನೆ ಸಂಜೆ ರಾಜಮ್ಮ ಮನೆ ಮುಂದೆ ನಿಂತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಈಕೆಗೆ ನಾಡಬಂದೂಕಿನಿಂದ ಗುಂಡು ಹಾರಿಸಿದ್ದಾನೆ. ಗುಂಡಿನ ಶಬ್ಧ ಕೇಳಿ ಸುತ್ತಮುತ್ತಲಿನವರು ಗಾಬರಿಗೊಂಡು ಮನೆಯಿಂದ ಹೊರಬಂದು ನೋಡಿದಾಗ ರಾಜಮ್ಮ ರಕ್ತದ ಸ್ರಾವದಿಂದ ಕೆಳಗೆ ಬಿದ್ದಿದ್ದರು. ಕೂಡಲೇ ಅವರನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು.

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಹಲಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಹಳೇ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಗುಂಡು ಹಾರಿಸಿದ ವ್ಯಕ್ತಿಗಾಗಿ ಶೋಧ ಮುಂದುವರೆಸಿದ್ದು, ಹಲಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments