ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ: ಮಹಿಳೆ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

ಹನೂರು,ಜೂ.5-ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮಹಿಳೆಯೊಬ್ಬರು ವಿದ್ಯುತ್ ಅವಘಡಕ್ಕೆ ಸಿಲುಕಿ ಮೃತಪಟ್ಟಿರುವ ಘಟನೆ ನಡೆದಿದೆ.
ಕುಡ್ಲೂರು ಗ್ರಾಮದ ಮಡಿವಾಳ ಶೆಟ್ಟರ ಸಮುದಾಯದ ರಾಜಿ ಗೋವಿಂದ ಮೃತಪಟ್ಟ ಮಹಿಳೆ.

ಇಂದು ಬೆಳಗಿನ ಜಾವ ಈಕೆ ಬಹಿರ್ದೆಸೆಗೆ ತೆರಳುವಾಗ ಗ್ರಾಮದ ಸರ್ಕಾರಿ ಶಾಲೆ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಕತ್ತಲಲ್ಲಿ ತುಳಿದಿದ್ದರಿಂದ ಶಾಕ್ ಹೊಡೆದು ಸಾವನ್ನಪ್ಪಿದ್ದಾಳೆ.

ಹನೂರು ತಾಲ್ಲೂಕಿನ ಹೂಗ್ಯಾಂ ಗ್ರಾಪಂ ವ್ಯಾಪ್ತಿಯ ಕುಡ್ಲೂರು ಗ್ರಾಮದಲ್ಲಿನ ಈ ಅವಘಡಕ್ಕೆ ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆರೋಪಿಸಿದರು.

ಮಳೆ, ಗಾಳಿ ಹಿನ್ನೆಲೆಯಲ್ಲಿ ವಿದ್ಯುತ್ ತಂತಿಗಳು ಅಲ್ಲಲ್ಲಿ ಮುರಿದು ಬಿದ್ದಿದ್ದರೂ ಚೆಸ್ಕಾಂ ಅಧಿಕಾರಿಗಳು ಇತ್ತ ಗಮನಹರಿಸದೆ ನಿರ್ಲಕ್ಷ್ಯ ವಹಿಸುವುದರಿಂದಲೇ ಇಂತಹ ಅವಘಡಗಳು ಸಂಭವಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ಈ ಕೂಡಲೇ ವಿದ್ಯುತ್ ತಂತಿಗಳ ದುರಸ್ತಿಪಡಿಸುವಂತೆ ಆಗ್ರಹಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ