ಪತಿಯ ಕಿರುಕುಳದಿಂದ ಮನನೊಂದು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಚಿಕ್ಕಮಗಳೂರು,ಆ.3- ಪತಿಯ ಕಿರುಕುಳದಿಂದ ನೊಂದ ತಾಯಿ ತನ್ನಿಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಎನ್.ಆರ್. ಪುರ ತಾಲೂಕಿನ ಹುಣಸೆ ಕೊಪ್ಪ ಗ್ರಾಮದಲ್ಲಿ ನಡೆದಿದೆ.

ತಾಯಿ ಲಕ್ಷ್ಮಿ(25) ಮಕ್ಕಳಾದ ಸೌಜನ್ಯ(5) ಆದ್ಯ(2) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ನತದೃಷ್ಟರು.ಕಳೆದ ಶುಕ್ರವಾರ ವರಮಹಾಲಕ್ಷ್ಮಿ ಹಬ್ಬದಂದು ತಾಯಿ ಲಕ್ಷ್ಮಿ ತನ್ನಿಬ್ಬರು ಮಕ್ಕಳ ಜೊತೆ ಮನೆಯಿಂದ ಹೊರಟು ಹೋಗಿದ್ದರು.

ಪತಿ ಭಾಸ್ಕರ್ ಪತ್ನಿ, ಮಕ್ಕಳು ಕಾಣೆಯಾಗಿರುವ ಬಗ್ಗೆ ಪೆÇಲೀಸರಿಗೆ ದೂರು ನೀಡಿದ್ದರು. ನಿನ್ನೆ ಖಾಸಗಿ ತೋಟದ ಕೆರೆಯಲ್ಲಿ ಇಬ್ಬರು ಹೆಣ್ಣುಮಕ್ಕಳು ಹಾಗೂ ತಾಯಿಯ ಮೃತದೇಹ ಪತ್ತೆಯಾಗಿದ್ದವು.

ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿ ಸ್ಥಳೀಯರ ನೆರವಿನೊಂದಿಗೆ ಮೃತದೇಹಗಳನ್ನು ಹೊರತೆಗೆದು ಪರಿಶೀಲಿಸಿ ನಂತರ ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದರು.

ಘಟನೆ ಸಂಬಂಧ ಲಕ್ಷ್ಮಿ ಸಹೋದರ ರವಿಚಂದ್ರನ್ ಅವರು ಭಾಸ್ಕರ್ ವಿರುದ್ಧ ವರದಕ್ಷಿಣೆ ಕಿರುಕುಳದ ದೂರು ದಾಖಲಿಸಿದ್ದಾರೆ. ವರದಕ್ಷಿಣೆಗಾಗಿ ಭಾಸ್ಕರ್ ಆಗಾಗ ಕಿರುಕುಳ ನೀಡುತ್ತಿದ್ದ ಕಾರಣ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಘಟನೆಯ ಸಂಬಂಧ ದೂರು ದಾಖಲಿಸಿಕೊಂಡಿರುವ ಬಾಳೆಹೊನ್ನೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ.

Facebook Comments

Sri Raghav

Admin