ಕೆರಳಿದ ಕಾಂಗ್ರೆಸ್ ನಾರಿಯರು, ಪೊಲೀಸ್ ಠಾಣೆಗೆ ಮುತ್ತಿಗೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.16- ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿನ ಸರ್ಕಾರಿ ಅಕಾರಿಗಳು ಬಿಜೆಪಿ ಅಭ್ಯರ್ಥಿಯ ಕೈಗೊಂಬೆಯಂತೆ ವರ್ತಿಸುತ್ತಿದ್ದು, ಕೂಡಲೇ ಎಲ್ಲರನ್ನು ಬದಲಾವಣೆ ಮಾಡಬೇಕು, ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ದಾಖಲಿಸಿರುವ ಎಫ್‍ಐಆರ್‍ನ್ನು ವಜಾಗೊಳಿಸ ಬೇಕೆಂದು ಮಹಿಳಾ ಕಾಂಗ್ರೆಸ್, ಪೆಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ.

ಮಾಜಿ ಸಚಿವೆ ಉಮಾಶ್ರೀ, ಶಾಸಕಿಯರಾದ ಸೌಮ್ಯಾ ರೆಡ್ಡಿ, ಲಕ್ಷ್ಮಿ ಹೆಬ್ಬಾಳ್ಕರ್, ಕೆಪಿಸಿಸಿ ಮಹಿಳಾ ಕಾಂಗ್ರೆಸ್‍ನ ಅಧ್ಯಕ್ಷೆ ಪುಷ್ಪಾ ಅಮರನಾಥ್ ನೇತೃತ್ವದಲ್ಲಿ ಇಂದು ಬೆಳಗ್ಗೆ ರಾಜ ರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಎಫ್‍ಐಆರ್ ದಾಖಲಿಸಿದ ಇನ್‍ಸ್ಪೆಕ್ಟರ್ ನವೀನ್ ಸುಧಾಕರ್ ಅವರನ್ನು ವರ್ಗಾವಣೆ ಮಾಡಬೇಕೆಂದು ಅವರು ಆಗ್ರಹಿಸಿದ್ದಾರೆ.

ಚುನಾವಣಾ ಅಕಾರಿಯ ಕಚೇರಿ ವ್ಯಾಪ್ತಿಯೊಳಗೆ ಸಿದ್ದರಾಮಯ್ಯನವರ ಕಾರು ಬಂದಿದ್ದರೆ, ಸಿದ್ದರಾಮಯ್ಯ ಅವರ ವಿರುದ್ಧ ಅಥವಾ ಅವರ ಕಾರು ಚಾಲಕರ ವಿರುದ್ಧ ಎಫ್‍ಐಆರ್ ದಾಖಲಿಸಬೇಕಿತ್ತು.

ಅದನ್ನು ಬಿಟ್ಟು ಮಹಿಳಾ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಎಫ್‍ಐಆರ್ ದಾಖಲಿಸಿ ಬೆದರಿಕೆಯ ತಂತ್ರ ಅನುಸರಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಇಂಥದ್ದಕ್ಕೆಲ್ಲ ಹೆದರುವುದಿಲ್ಲ. ಆರ್‍ಆರ್‍ನಗರ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಅಕಾರಿಗಳು, ಬಿಜೆಪಿ ಮತ್ತು ಬಿಜೆಪಿ ಅಭ್ಯರ್ಥಿಯ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಪೊಲೀಸರು ಸೇರಿದಂತೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿರುವ ಅಕಾರಿಗಳನ್ನು ಬದಲಾವಣೆ ಮಾಡಬೇಕು.

ಕುಸುಮಾ ವಿರುದ್ಧ ದಾಖಲಿಸಲಾಗಿರುವ ಎಫ್‍ಐಆರ್‍ನ್ನು ರದ್ದ ಮಾಡಿ ಬಿ ವರದಿ ಸಲ್ಲಿಸಬೇಕು. ಇನ್‍ಸ್ಪೆಕ್ಟ್ ನವೀನ್ ಸುಧಾಕರ್ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಮಹಿಳಾ ಕಾಂಗ್ರೆಸ್‍ನ ಕಾರ್ಯಕರ್ತರು, ಮುಖಂಡರು, ಠಾಣೆಗೆ ಮುತ್ತಿಗೆ ಹಾಕುತ್ತಿದ್ದಂತೆ ಡಿಸಿಪಿ ಸಂಜೀವ್ ಪಾಟೀಲ್ ಆಗಮಿಸಿ ಮನವಿ ಸ್ವೀಕರಿಸಿದರು.
ಚುನಾವಣಾ ಆಯೋಗದ ಉಸ್ತುವಾರಿಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಯದ ಹೊರತು ಎಫ್‍ಐಆರ್‍ನ್ನು ರದ್ದುಪಡಿಸಲು ಸಾಧ್ಯವಿಲ್ಲ ಎಂದು ಮನವೊಲಿಸಿದ್ದಾರೆ.

ಪ್ರತಿಭಟನೆ ಬಳಿಕ ಮಹಿಳಾ ಕಾಂಗ್ರೆಸಿಗರು ರಾಜರಾಜೇಶ್ವರಿನಗರ ಉಪಚುನಾವಣೆಯ ಚುನಾವಣಾಕಾರಿಗಳನ್ನು ಭೇಟಿ ಮಾಡಿ ದೂರು ನೀಡಿದ್ದು, ಪಕ್ಷಪಾತ ಮಾಡುವ ಅಕಾರಿಗಳನ್ನು ವರ್ಗಾವಣೆ ಮಾಡುವಂತೆ ಒತ್ತಾಯಿಸಿದ್ದಾರೆ.

Facebook Comments

Sri Raghav

Admin