ಕತ್ತು ಹಿಸುಕಿ ಗಾರ್ಮೆಂಟ್ಸ್ ಮಹಿಳಾ ಉದ್ಯೋಗಿಯ ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

Murder-n-01

ಬೆಂಗಳೂರು,ಅ.5-ಗಾರ್ಮೆಂಟ್ಸ್ ಮಹಿಳಾ ಉದ್ಯೋಗಿಯೊಬ್ಬರನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಇಂದು ಮುಂಜಾನೆ ನಂದಿನಿಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಲ್ಪನಾ (27) ಕೊಲೆಯಾದ ಮಹಿಳೆ.  ಈ ಕೊಲೆಯನ್ನು ಮಹಿಳೆಯ ಪತಿಯೇ ಮಾಡಿ ಪರಾರಿಯಾಗಿದ್ದಾನೆ ಎಂದು ನಂದಿನಿ ಲೇಔಟ್ ಠಾಣೆ ಪೊಲೀಸರು ಶಂಕಿಸಿದ್ದು, ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ.

ಮೂಲತಃ ಆಂಧ್ರಪ್ರದೇಶದವರಾದ ಕಲ್ಪನಾ ಮತ್ತು ಆಕೆಯ ಪತಿ ರಮೇಶ ಲಗ್ಗೆರೆಯ ಲಕ್ಷ್ಮಿದೇವಿ ನಗರದಲ್ಲಿ ಮನೆ ಮಾಡಿಕೊಂಡು ವಾಸಿಸುತ್ತಿದ್ದರು. ಇಬ್ಬರು ಗಾರ್ಮೆಂಟ್ಸ್‍ನಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು. ಮುಂಜಾನೆ ಸಹ ಪತಿ-ಪತ್ನಿ ನಡುವೆ ಜಗಳವಾಗಿದೆ. ಜಗಳದ ಸದ್ದು ಕೇಳಿಸುತ್ತಿತ್ತೆಂದು ಅಕ್ಕಪಕ್ಕದ ನಿವಾಸಿಗಳು ತಿಳಿಸಿದ್ದಾರೆ.

ಬೆಳಗ್ಗೆ ಕಲ್ಪನಾಳ ತಾಯಿ ಬಂದು ನೋಡಿದಾಗ ಕೊಲೆಯಾಗಿರುವುದು ಗೊತ್ತಾಗಿದೆ. ತಾಯಿ ನೀಡಿದ ದೂರಿನ ಮೇರೆಗೆ ನಂದಿನಿ ಲೇಔಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಾರಿಯಾಗಿರುವ ಕಲ್ಪನಾಳದ ಪತಿ ರಮೇಶನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Facebook Comments

Sri Raghav

Admin