ವಿಶ್ವಕಪ್ : ಲಂಕಾ ವಿರುದ್ಧ ಭಾರತಕ್ಕೆ 7 ವಿಕೆಟ್ ಗಳ ಭರ್ಜರಿ ಜಯ

ಈ ಸುದ್ದಿಯನ್ನು ಶೇರ್ ಮಾಡಿ

ಲೀಡ್ಸ್ : ಐಸಿಸಿ 2019 ಏಕದಿನ ವಿಶ್ವಕಪ್‌ನಲ್ಲಿ ಶನಿವಾರ ಶ್ರೀಲಂಕಾ ವಿರುದ್ಧ ನಡೆದ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಟೀಮ್ ಇಂಡಿಯಾ ಏಳು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.

ಈ ಮೂಲಕ ಟೀಂ ಇಂಡಿಯಾ 15 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಆದರೆ ಭಾರತದ ಅಗ್ರಪಟ್ಟ ಸೌತ್ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ಪಂದ್ಯದ ಫಲಿತಾಂಶದ ಮೇಲೆ ಅವಲಂಬಿತವಾಗಿದೆ. ಇತ್ತ ಶ್ರೀಲಂಕಾ ಸೋಲಿನೊಂದಿಗೆ ವಿಶ್ವಕಪ್ ಟೂರ್ನಿಗೆ ಹೊರಬಿದ್ದಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಶ್ರೀಲಂಕಾ ಏಂಜೆಲೋ ಮ್ಯಾಥ್ಯೂಸ್ (113) ಶತಕದ ಹೊರತಾಗಿಯೂ ಜಸ್ಪ್ರೀತ್ ಬುಮ್ರಾ (37ಕ್ಕೆ 3 ವಿಕೆಟ್) ರನ್ ಗಳಿಸಲಷ್ಟೇ ಶಕ್ತವಾಯಿತು. ಬಳಿಕ ಗುರಿ ಬೆನ್ನಟ್ಟಿದ ಭಾರತಕ್ಕೆ ರೋಹಿತ್ ಶರ್ಮಾ (103) ಹಾಗೂ ಕೆಎಲ್ ಶತಕದ (111) ವೈಭವದ ನೆರವಿನಿಂದ ಮೂರು ವಿಕೆಟ್ ನಷ್ಟಕ್ಕೆ ಭರ್ಜರಿ ಗೆಲುವು ದಾಖಲಿಸಿತು.

ಏಕದಿನ ಗೆಲುವಿನಲ್ಲಿ ಟೀಂ ಇಂಡಿಯಾ ದಾಖಲೆ :
ವಿಶ್ವಕಪ್ ಲೀಗ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತ 7 ವಿಕೆಟ್ ಗಳ ಗೆಲುವಿನೊಂದಿಗೆ ಟೀಂ ಇಂಡಿಯಾ ದಾಖಲೆ ಬರೆದಿದೆ. ಏಕದಿನ ಕ್ರಿಕೆಟ್‌ನಲ್ಲಿ ಶ್ರೀಲಂಕಾ ವಿರುದ್ದ ಭಾರತಕ್ಕಿದು 91ನೇ ಗೆಲುವು. ಏಕದಿನ ಕ್ರಿಕೆಟ್‌ನಲ್ಲಿ ಒಂದು ತಂಡದ ವಿರುದ್ಧ ಗರಿಷ್ಠ ಗೆಲುವು ದಾಖಲಿಸಿದ ಪಟ್ಟಿಯಲ್ಲಿ ಇದೀಗ ಭಾರತ ಹಾಗೂ ಆಸ್ಟ್ರೇಲಿಯಾ ಜಂಟಿಯಾಗಿ ಮೊದಲ ಸ್ಥಾನ ಹಂಚಿಕೊಂಡಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin