ಗೆಲುವಿಗೆ ಅಭಿನಂದಿಸಿದ ವಿಶ್ವನಾಯಕರಿಗೆ ಕೃತಜ್ಞತೆ ಸಲ್ಲಿಸಿದ ಮೋದಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಮೇ 24- ಲೋಕಸಭೆ ಚುನಾವಣೆಯಲ್ಲಿ ಪ್ರಚಂಡ ಜಯಭೇರಿಯೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೆ ಬರಲಿರುವ ಎನ್‍ಡಿಎ ಮತ್ತು ತಮಗೆ ಅಭಿನಂದಿಸಿದ ವಿಶ್ವದ ನಾಯಕರು ಮತ್ತು ಖ್ಯಾತನಾಮರಿಗೆ ಪ್ರಧಾನಿ ನರೇಂದ್ರಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ.

ಈ ಕುರಿತು ಇಂದು ಸರಣಿ ಟ್ವೀಟ್ ಮಾಡಿರುವ ಮೋದಿ,ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉಪಾಧ್ಯಕ್ಷ ಮೈಕ್ ಫೆನ್ಸ್ ಅವರಿಗೆ ಕೃತಜ್ಞತೆ ಸಲ್ಲಿಸಿ ಮುಂದೆಯೂ ಅಮೆರಿಕ ಜೊತೆ ಭಾರತ ಎಲ್ಲ ಕ್ಷೇತ್ರಗಳಲ್ಲೂ ಉತ್ತಮ ಸಂಬಂಧ ಹೊಂದಲು ಬಯಸುತ್ತದೆ ಎಂದು ಹೇಳಿದ್ದಾರೆ.

ಕೆನಡಾ ಅಧ್ಯಕ್ಷ ಜಸ್ಟೀನ್ ಟ್ರೂಡ್ಯೂ, ಫ್ರಾನ್ಸ್ ಪ್ರಧಾನಮಂತ್ರಿ ಎಮ್ಯಾನ್ಯೂಯಲ್ ಮ್ಯಾಕ್ರೋನ್, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆಥನ್ಯಾಹೂ, ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ಬಾಂಗ್ಲಾ ಪ್ರಧಾನಮಂತ್ರಿ ಶೇಖ್ ಹಸೀನಾ, ಇಂಡೋನೇಷ್ಯನೂತನ ಪ್ರಧಾನಿ ಜೋಕೋ ವಿಡಾಡೋ, ನೈಜೀರಿಯಾ ಅಧ್ಯಕ್ಷ ಮೊಹಮ್ಮದ್ ಬುಹರಿ

ಸೇರಿದಂತೆ ಅನೇಕ ನಾಯಕರಿಗೆ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ. ಭಾರತ ಎಲ್ಲ ರಾಷ್ಟ್ರಗಳೊಂದಿಗೆ ಸೌಹಾರ್ದ ಸಂಬಂಧ ಬಯಸುತ್ತದೆ. ಮುಂದೆಯೂ ಉತ್ತಮ ಸಹಕಾರ ಮತ್ತು ಬಾಂಧವ್ಯ ವರ್ಧನೆಯನ್ನು ನಾವು ಎದುರು ನೋಡುತ್ತೇವೆ ಎಂದು ಮೋದಿ ತಿಳಿಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ