ಪ್ರತಿವರ್ಷ ತಂಬಾಕಿಗೆ 10 ಲಕ್ಷ ಜನ ಬಲಿ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 31-ದೇಶದಲ್ಲಿ ಪ್ರತಿವರ್ಷ ತಂಬಾಕು ಸೇವನೆಗೆ ಸುಮಾರು 8 ರಿಂದ 10 ಲಕ್ಷ ಜನ ಬಲಿಯಾಗುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ದೇಶಕ ಡಾ.ಪಿ.ಎಸ್. ಹರ್ಷ ಹೇಳಿದರು.

ವಿಶ್ವ ತಂಬಾಕು ಮುಕ್ತ ದಿನಾಚರಣೆ ಪ್ರಯುಕ್ತ ಕೆಎಸ್‍ಆರ್‍ಟಿಸಿ ಹಮ್ಮಿಕೊಂಡಿದ್ದ ತಂಬಾಕನ್ನು ದೂರವಿಡಿ-ನಿಮ್ಮ ಉಸಿರನ್ನು ಕಾಪಾಡಿ ಕಾರ್ಯಕ್ರಮಕ್ಕೆ ತಂಬಾಕಿನ ಮೇಲೆ ನೀರು ಸುರಿಯುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಕಳೆದ 6 ವರ್ಷಗಳಲ್ಲಿ ಬಸ್ ನಿಲ್ದಾಣಗಳಲ್ಲಿ ಧೂಮಪಾನ ಮಾಡುವವರಿಂದ 1,31,223 ಪ್ರಯಾಣಿಕರಿಂದ 2,62,44,600 ರೂ.ಯಷ್ಟು ದಂಡ ವಿಧಿಸಲಾಗಿದೆ.ದಂಡ ವಿಧಿಸುವುದೊಂದೇ ಪರಿಹಾರಲ್ಲ.

ಸಾರ್ವಜನಿಕರು ಹಾಗೂ ನಿಗಮದ ಸಿಬ್ಬಂದಿಗಳಲ್ಲಿ ಅರಿವು ಮೂಡಿಸುವ ಅವಶ್ಯಕತೆ ಇದೆ. ದೇಶದಲ್ಲಿ ಯಾವುದೇ ಸಾರಿಗೆ ನಿಗಮಗಳಲ್ಲಿ ಇಷ್ಟು ಕಟ್ಟುನಿಟ್ಟಾಗಿ ಧೂಮಪಾನ ನಿಷಿದ್ಧವನ್ನು ಜಾರಿಗೊಳಿಸಲ್ಲ ಎಂದು ಹೇಳಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ದೇಶಕ ಪಿ.ಆರ್.ಶಿವಪ್ರಸಾದ್ ಮಾತನಾಡಿ, ಧೂಮಪಾನ ಮಾಡುವುದು ಅಪರಾಧ. ಇದನ್ನು ಉಲ್ಲಂಘಿಸಿದರೆ 200 ರೂ.ಗಳವರೆಗೆ ದಂಡ ವಿಧಿಸಲಾಗುವುದು ಎಂಬ ಫಲಕವನ್ನು ಎಲ್ಲೆಡೆ ಪ್ರದರ್ಶಿಸಲಾಗಿದೆ.

ಪ್ರತಿದಿನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ 1 ರಿಂದ 1.25 ಲಕ್ಷ ಜನ ಪ್ರಯಾಣಿಸುತ್ತಾರೆ. ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಪ್ರಚಾರ, ಮಾರಾಟ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ತಂಬಾಕು ಸೇವನೆ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯುತ್ತದೆ ಎಂದು ಹೇಳಿದರು.ಇದೇ ವೇಳೆ ಸಿಂಧಿ ಕಾಲೇಜು ವಿದ್ಯಾರ್ಥಿಗಳಿಂದ ಬಸ್ ನಿಲ್ದಾಣದಲ್ಲಿ ಜಾಗೃತಿ ಕಾರ್ಯಕ್ರಮ ಹಾಗೂ ಆರೋಗ್ಯ ಇಲಾಖೆ ವತಿಯಿಂದ ರೂಪಾಂತರ ರಂಗ ತಂಡದಿಂದ ತಂಬಾಕು ದುಷ್ಪರಿಣಾಮ ಕುರಿತು ಬೀದಿ ನಾಟಕ ಪ್ರದರ್ಶಿಸಲಾಯಿತು.

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಉಪನಿರ್ದೇಶಕ ಡಾ.ವಿವೇಕ್‍ದೊರೈ, ಆರೋಗ್ಯ ಇಲಾಖೆಯ ಡಾ.ಶ್ರೀದೇವಿ, ಕೆಎಸ್‍ಆರ್‍ಟಿಸಿ ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿ ಜಿ.ಎನ್. ಲಿಂಗರಾಜು, ಶ್ರೀ ನಾರಾಯಣ್ ಸೇವಾ ಸಂಸ್ಥಾನದ ಡಾ.ಸಚಿನ್‍ಸಿನ್ಹಾ, ಕೆಂಪೇಗೌಡ ಬಸ್ ನಿಲ್ದಾಣದ ನಿಯಂತ್ರಣಾಧಿಕಾರಿ ಇನಾಯತ್ ಭಾಗ್‍ಭಾನ್ ಮತ್ತಿತರರು ಉಪಸ್ಥಿತರಿದ್ದರು.

Facebook Comments

Sri Raghav

Admin