ವಿಶ್ವದಾದ್ಯಂತ 2 ಕೋಟಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ..!
ವಾಷ್ಟಿಂಗ್ಟನ್/ರಿಯೋ-ಡಿ-ಜನೈರೋ, ಆ.10-ವಿಶ್ವದ 215ಕ್ಕೂ ಹೆಚ್ಚು ದೇಶಗಳ ಮೇಲೆ ಡೆಡ್ಲಿ ಕೋವಿಡ್-19 ವೈರಸ್ ಪ್ರಹಾರ ಮತ್ತಷ್ಟು ತೀವ್ರಗೊಂಡಿದೆ. ಪ್ರತಿನಿತ್ಯ ಸೋಂಕು ಮತ್ತು ಸಾವು ಪ್ರಕರಣಗಳು ಆತಂಕಕಾರಿ ಮಟ್ಟದಲ್ಲಿ ವರದಿಯಾಗುತ್ತಲೇ ಇದೆ.
ಜಗತ್ತಿನಾದ್ಯಂತ ರೋಗಪೀಡಿತರ ಸಂಖ್ಯೆ 2 ಕೋಟಿ ಹಾಗೂ ಒಟ್ಟು ಸಾವಿನ ಸಂಖ್ಯೆ 7.34 ಲಕ್ಷ ದಾಟಿದೆ. ಇದರ ನಡುವೆಯೂ ವಿಶ್ವದಲ್ಲಿ ಈವರೆಗೆ 1.29 ಕೋಟಿಗೂ ಅಕ ರೋಗಿಗಳು ಗುಣಮುಖರಾಗಿರುವುದು ತುಸು ಸಮಾಧಾನಕರ ಸಂಗತಿಯಾಗಿದೆ.
ಆದರೆ ಇನ್ನೂ 63.93 ಲಕ್ಷ ಸಕ್ರಿಯ ಪ್ರಕರಣಗಳು ವರದಿಯಾಗಿರುವುದು ಆತಂಕದ ಸಂಗತಿಯಾಗಿದೆ. ವಿಶ್ವವ್ಯಾಪಿ ನಿನ್ನೆ ಮಧ್ಯರಾತ್ರಿವರೆಗೆ 7,34,098 ಮಂದಿ ಸಾವಿಗೀಡಾಗಿದ್ದು, 2,00,31,558 ಸೋಂಕು ಪ್ರಕರಣಗಳು ವರದಿಯಾಗಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 63,93,448 ದಾಟಿದೆ. ಅಲ್ಲದೇ ಇನ್ನೂ 64,830ಕ್ಕೂ ಹೆಚ್ಚು ರೋಗಿಗಳ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗುವ ಆತಂಕವಿದೆ.
ನಾಳೆ ವೇಳೆಗೆ ಸಾವಿನ ಸಂಖ್ಯೆ ಎಂಟು ಲಕ್ಷ ಮತ್ತು ಸಾಂಕ್ರಾಮಿಕ ರೋಗಿಗಳ ಪ್ರಮಾಣ 2.01 ಕೋಟಿ ದಾಟುವ ಆತಂಕವಿದೆ.ವ್ಯಾಪಕ ಸಾವು-ನೋವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಮಧ್ಯೆ ರೋಗಿಗಳ ಚೇತರಿಕೆ/ಗುಣಮುಖ ಪ್ರಮಾಣದಲ್ಲೂ ವೃದ್ದಿ ಕಂಡುಬಂದಿದೆ..
ವಿಶ್ವದಲ್ಲಿ ಈವರೆಗೆ 1,29,04,043 ಮಂದಿ ರೋಗಿಗಳು ಚೇತರಿಸಿಕೊಂಡಿದ್ದಾರೆ ಮತ್ತು ಗುಣಮುಖರಾಗಿದ್ದಾರೆ.ಅಮೆರಿಕ, ಬ್ರೆಜಿಲ್, ಭಾರತ, ರಷ್ಯಾ, ಮತ್ತು ದಕ್ಷಿಣ ಆಫ್ರಿಕಾ ಕೊರೊನಾ ಕೇಸ್ಗಳಲ್ಲಿ ವಿಶ್ವದ ಟಾಪ್ ಫೈವ್ ದೇಶಗಳಾಗಿವೆ
ಏಷ್ಯಾದಲ್ಲೇ ಈವರೆಗೆ 1.38 ಕೋಟಿಗೂ ಅಕ ಮಂದಿಯಲ್ಲಿ ಸೋಂಕು ವರದಿಯಾಗಿದೆ.