ಯಾದಗಿರಿ ಡಿಸಿ ಕಚೇರಿಗೂ ವಕ್ಕರಿಸಿದ ಕೊರೊನಾ

ಈ ಸುದ್ದಿಯನ್ನು ಶೇರ್ ಮಾಡಿ

ಯಾದಗಿರಿ, ಜು.10- ನಗರದ ಜಿಲ್ಲಾಧಿಕಾರಿ ಕಚೇರಿಗೂ ಡೆಡ್ಲಿ ಕೊರೊನಾ ಕಾಲಿಟ್ಟಿದ್ದು, ಸಿಬ್ಬಂದಿಯಲ್ಲಿ ಆತಂಕ ಶುರುವಾಗಿದೆ. ಜಿಲ್ಲಾಧಿಕಾರಿ ಕೂರ್ಮರಾವ್ ಅವರಿಗೂ ಆತಂಕ ಶುರುವಾಗಿದೆ. ಜಿಲ್ಲಾಧಿಕಾರಿಗಳ ಗನ್‍ಮ್ಯಾನ್ ಹಾಗೂ ವಾಹನ ಚಾಲಕ ಸೇರಿದಂತೆ 25 ಮಂದಿಗೆ ಸೋಂಕು ಕಾಣಿಸಿಕೊಂಡಿದೆ.

ಹಾಗಾಗಿ ಡಿಸಿ ಕಚೇರಿಯನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗಿದ್ದು, ಅವರೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದವರನ್ನು ಪತ್ತೆಹಚ್ಚಲಾಗುತ್ತಿದೆ.

Facebook Comments