ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಯಡಿಯೂರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa-Siddaganga-Shre
ತುಮಕೂರು, ಡಿ.7- ಶ್ರೀ ಸಿದ್ಧಗಂಗಾ ಶ್ರೀಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈಗೆ ಕರೆದೊಯ್ಯುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದರು. ಇಂದು ಬೆಳಗ್ಗೆ ಮಠಕ್ಕೆ ಭೇಟಿ ನೀಡಿ ಶ್ರೀಗಳೊಂದಿಗೆ ಮಾತನಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳು ಬೆಳಗಿನ ಉಪಹಾರ ಸೇವಿಸಿದ್ದು, ಲವಲವಿಕೆಯಿಂದ ಇದ್ದಾರೆ.

ಚೆನ್ನೈನಲ್ಲಿ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮುಗಿಸಿಕೊಂಡು ವಾಪಸಾಗುತ್ತಾರೆ. ಈ ವಯಸ್ಸಿನಲ್ಲೂ ಶ್ರೀಗಳು ಬಸವಣ್ಣನವರ ವಚನಗಳನ್ನು ಹೇಳುತ್ತಿದ್ದಾರೆ. ಅವರಿಗೆ ಹೆಚ್ಚಿನ ಆಯಸ್ಸು ಸಿಗಲಿ. ಇನ್ನೂ ಹತ್ತಾರು ವರ್ಷಗಳ ಕಾಲ ಅವರ ದರ್ಶನ ಪಡೆದು ಆಶೀರ್ವಾದ ಪಡೆಯುವ ಅವಕಾಶ ನಮಗೂ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.  ಇದೇ ಸಂದರ್ಭದಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಸೇರಿದಂತೆ ಹಲವು ಗಣ್ಯರು ಶ್ರೀಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದರು.

Facebook Comments

Sri Raghav

Admin