“ಸಿದ್ದರಾಮಯ್ಯ ಆರೋಪಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ”

ಈ ಸುದ್ದಿಯನ್ನು ಶೇರ್ ಮಾಡಿ

ದಾವಣಗೆರೆ,ಅ.24- ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಏನೇ ಆರೋಪ ಮಾಡಿದರೂ ಗೆಲ್ಲಲ್ಲ, ಅವರ ಆರೋಪಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆಗಳ ಫಲಿತಾಂಶ ಬಿಜೆಪಿ ಪರ ಬರುತ್ತದೆ. ಹಾನಗಲ್ ಮತ್ತು ಸಿಂದಗಿ ಎರಡು ಕ್ಷೇತ್ರಗಳಲ್ಲಿ ದೊಡ್ಡ ಅಂತರದಲ್ಲಿ ಪಕ್ಷ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಯ ಎಲ್ಲಾ ನಾಯಕರು ಕ್ಷೇತ್ರದಲ್ಲೇ ಟೀಕಾಣಿ ಹೂಡಿದ್ದಾರೆ. ಎರಡು ಕ್ಷೇತ್ರದಲ್ಲಿ ದೊಡ್ಡ ಸಭೆ ನಡೆಸಿದ್ದು, ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ ಎಂದರು.

ಸಿಂದಗಿ ಹಾಗೂ ಹಾನಗಲ್ ಕ್ಣೇತ್ರಗಳಲ್ಲಿ ಸಿದ್ದರಾಮಯ್ಯ ಅವರ ಅಪಪ್ರಚಾರಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ, ವಿಪಕ್ಷ ಅಂದ ಮೇಲೆ ಅಪಪ್ರಚಾರ ಸ್ವಾಭಾವಿಕ. ಸಿದ್ದರಾಮಯ್ಯ ಏನೇ ಮಾತನಾಡಿದರೂ ಏನು ಆಗುವುದಿಲ್ಲ. ಫಲಿತಾಂಶ ಬಂದ ಮೇಲೆ ಅವರಿಗೆ ತಿಳಿಯಲಿದೆ ಎಂದು ಬಿಎಸ್‍ವೈ ಗುಡುಗಿದರು.

Facebook Comments

Sri Raghav

Admin