ಕೆಲವು ಹಾಲಿ ಬಿಜೆಪಿ ಸಂಸದರಿಗೆ ಟಿಕೆಟ್ ಡೌಟ್..?

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa--01
ಬೆಂಗಳೂರು, ಅ.2- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಾಲಿ ಸಂಸದರಿಗೆ ಟಿಕೆಟ್ ನೀಡುವ ಅಪೇಕ್ಷೆಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವ್ಯಕ್ತಪಡಿಸಿದ್ದು, ಹಲವು ಹಾಲಿ ಸಂಸದರಿಗೆ ಕೋಕ್ ನೀಡುವ ಸಾಧ್ಯತೆಯ ಸುದ್ದಿಯನ್ನು ಪರೋಕ್ಷವಾಗಿ ತಳ್ಳಿಹಾಕಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಹಾಲಿ ಸಂಸದರನ್ನು ಕಣಕ್ಕಿಳಿಸುವ ಅಪೇಕ್ಷೆ ಇದೆ.

ಈ ಸಂಬಂಧ ಅವರೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ಇತರೆ ಕ್ಷೇತ್ರಗಳಿಗೂ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಹೇಳಿದರು. ಲೋಕಸಭಾ ಚುನಾವಣಾ ತಯಾರಿ ಆರಂಭಿಸಲಾಗಿದೆ. ಬನಶಂಕರಿಗೆ ಬಂದಿರುವುದು ಕೇವಲ ಸ್ವಚ್ಛ ಭಾರತ ಅಭಿಯಾನಕ್ಕಾಗಿ ಅಲ್ಲ. ನಿಶ್ಚಿತವಾಗಿ ಚುನಾವಣಾ ತಯಾರಿಯ ಭಾಗವಾಗಿಯೇ ಎಲ್ಲರೂ ಒಟ್ಟಾಗಿ ಬಂದಿದ್ದೇವೆ ಎನ್ನುವ ಮೂಲಕ ಲೋಕಸಭಾ ಚುನಾವಣಾ ಸಮರ ಸಾರಿದ ಸುಳಿವು ನೀಡಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಅವರು ಬರುವ ದಿನಾಂಕ ಇನ್ನು ನಿಗದಿಯಾಗಿಲ್ಲ. ಸದ್ಯದಲ್ಲೇ ದಿನಾಂಕ ನಿಗದಿಪಡಿಸಲಾಗುತ್ತದೆ ಎಂದು ಬಿಎಸ್‍ವೈ ಹೇಳಿದರು.

Facebook Comments

Sri Raghav

Admin