ಅಕ್ಟೋಬರ್‌’ನಲ್ಲಿ ಯಡಿಯೂರಪ್ಪ ಮತ್ತೆ ಸಿಎಂ ಆಗ್ತಾರೆ : ರಂಭಾಪುರಿ ಶ್ರೀ ಭವಿಷ್ಯ

ಈ ಸುದ್ದಿಯನ್ನು ಶೇರ್ ಮಾಡಿ

Rambaapura-shrtee

ತಿಪಟೂರು. ಜು.05 : ಸಿಎಂ ಪಟ್ಟಕ್ಕೇರಿ ಮೂರೇ ದಿನದಲ್ಲಿ ಕೆಳಗಿಳಿದಿದ್ದ ಬಿ. ಎಸ್. ಯಡಿಯೂರಪ್ಪನವರು ಅಕ್ಟೋಬರ್‌ ತಿಂಗಳಲ್ಲಿ ಮತ್ತೆ ಸಿಎಂ ಪಟ್ಟ ಅಲಂಕರಿಸಲಿದ್ದಾರೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.. ಯಡಿಯೂರಪ್ಪ ಅವರ ಜಾತಕ, ಕುಂಡಲಿ ಚೆನ್ನಾಗಿದ್ದು, ಮುಂದಿನ ಅಕ್ಟೋಬರ್‌ 2ನೇ ವಾರದೊಳಗೆ ಅವರು ರಾಜ್ಯದ ಮುಖ್ಯಮಂತ್ರಿಗಳಾಗುವ ಯೋಗವಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ. ತುಮಕೂರು ಜಿಲ್ಲೆಯ ಸೋಮೆಕಟ್ಟೆಕಾಡಸಿದ್ದೇಶ್ವರ ಮಠದ ನೂತನ ಶಿಲಾಮಠ ಲೋಕಾರ್ಪಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಅಕ್ಟೋಬರ್‌ ನಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಾರೆ. 104 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೂ ಬಹುಮತದ ಕೊರತೆಯಿಂದ ಯಡಿಯೂರಪ್ಪ ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಯಬೇಕಾಗಿತ್ತು. ನಂತರ ಕಾಂಗ್ರೆಸ್- ಜೆಡಿಎಸ್ ಸೇರಿ ಸರಕಾರ ರಚನೆ ಮಾಡಿದ್ದವು.

Facebook Comments

Sri Raghav

Admin