20 ಪ್ರಮುಖ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಯೋಜನಾ ವರದಿ ಸಿದ್ಧ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.17- ರಾಜ್ಯದ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 20 ಪ್ರಮುಖ ತಾಣಗಳ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ಸಿದ್ಧವಾಗಿದ್ದು, ಇವುಗಳನ್ನು ಹಂತ ಹಂತವಾಗಿ ಜಾರಿಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿರು ವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸ್ಮಾರ್ಟ್ ಅಪ್ ಯೋಜನೆಯಡಿ ಕಾರವಾನ್ ಪ್ರವಾಸೋದ್ಯಮದ ಉತ್ತೇಜನಕ್ಕಾಗಿ ಅಭಿವೃದ್ಧಿಪಡಿಸಿರುವ ನೂತನ ಕಾರವಾನ್ (ಮಿನಿ ಬಸ್)ಗಳಿಗೆ ಹಸಿರು ನಿಶಾನೆ ತೋರಿಸಿ ತೋರಿಸುವ ಮೂಲಕ ಚಾಲನೆ ನೀಡಿ ಬಳಿಕ ಮಾತನಾಡಿದರು.

ಪ್ರವಾಸೋದ್ಯಮ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದ್ದು, ಕಾರವಾನ್ ಪ್ರವಾಸೋದ್ಯಮ ಇದಕ್ಕೆ ಪೂರಕವಾಗಲಿದೆ. ರಾಜ್ಯಕ್ಕೆ ಪ್ರವಾಸಿಗರನ್ನು ಆಕರ್ಷಿಸುವ, ಅತ್ಯುತ್ತಮ ಪ್ರವಾಸಿ ಗಮ್ಯವಾಗಿಸುವ ನಿಟ್ಟಿನಲ್ಲಿ ಎಲ್ಲ ಪಾಲುದಾರರೂ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.

ಇದರ ಮೊದಲ ಭಾಗವಾಗಿ ಕಾರವಾನ್ ಪ್ರವಾಸೋದ್ಯಮಕ್ಕೆ ಇಂದು ಚಾಲನೆ ನೀಡಲಾಗಿದ್ದು, ಪ್ರಾಥಮಿಕ ಹಂತದಲ್ಲಿ ಹಂಪಿ, ಗೋಕರ್ಣ, ಬಾದಾಮಿ, ಕುದುರೆಮುಖ, ಸಕಲೇಶಪುರ, ಬೇಲೂರು, ಹಳೇಬೀಡು, ಸಕ್ರೆಬೈಲು ಹಾಗೂ ಕೊಡಗು ಪ್ರವಾಸಿ ತಾಣಗಳಲ್ಲಿ ಕಾರವಾನ್‍ಗಳನ್ನು ನಿಯೋಜಿಸಲಾಗುವುದು ಎಂದು ತಿಳಿಸಿದರು.

ಕಾರವಾನ್‍ಗಳ ನಿಲುಗಡೆಗೆ ಪ್ರಾಥಮಿಕ ಹಂತದಲ್ಲಿ ರಾಜ್ಯ ಸರ್ಕಾರದ ಸಂಸ್ಥೆಗಳಾದ ಅರಣ್ಯ ವಸತಿ ಮತ್ತು ವಿಹಾರಧಾಮ ಹಾಗೂ ಕೆಎಸ್‍ಟಿಡಿಸಿ ಘಟಕಗಳ ಆವರಣದಲ್ಲಿ ಸೌಲಭ್ಯಗಳನ್ನು ಒದಗಿಸಲಾಗುವುದು. ರಾಜ್ಯದ ನೂತನ ಪ್ರವಾಸಿ ನೀತಿಯನ್ವಯ ಇನ್ನೂ ಹೆಚ್ಚಿನ ಪ್ರವಾಸಿ ತಾಣಗಳಲ್ಲಿ ಕಾರವಾನ್ ಪ್ರವಾಸೋದ್ಯಮವನ್ನು ಪೆÇ್ರೀತ್ಸಾಹಿಸುವುದಾಗಿ ಆಶ್ವಾಸನೆ ನೀಡಿದರು.

ಕಾರವಾನ್ ಪ್ರವಾಸೋದ್ಯಮ ಪರಿಕಲ್ಪನೆಯು ಸ್ವತಂತ್ರ ತಿರುಗಾಟದ ಅನುಭವಕ್ಕಾಗಿ ಜನಪ್ರಿಯವಾಗಿದೆ. ಪ್ರವಾಸದ ಅವಧಿಯಲ್ಲಿ ಸೂಕ್ತ ರಕ್ಷಣೆ, ಸಾಮಾಜಿಕ ಅಂತರ ಕಾಯ್ದ್ದು ಕೊಳ್ಳಲು ಕಾರವಾನ್‍ನಲ್ಲಿ ಪ್ರವಾಸ ಕೈಗೊಳ್ಳುವುದು ಸೂಕ್ತವಾಗಿದೆ ಎಂದು ಅಭಿಪ್ರಾಯಪಟ್ಟರು. ಪ್ರವಾಸೋದ್ಯಮ ಅತಿ ಹೆಚ್ಚು ಉದ್ಯೋಗಗಳನ್ನು ಸೃಜಿಸುವ ಉದ್ಯಮವಾಗಿದೆ. ಪ್ರಸಕ್ತ ಸನ್ನಿವೇಶದಲ್ಲಿ ನಿರುದ್ಯೋಗ ನಿವಾರಣೆಯ ದಿಕ್ಕಿನಲ್ಲಿ ಪ್ರವಾಸೋ ದ್ಯಮಕ್ಕೆ ಚೇತರಿಕೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ.

ಕೋವಿಡ್-19ರ ನಂತರದ ದಿನಗಳಲ್ಲಿ ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಪುನಶ್ಚೇತನಗೊಳಿಸಲು ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು. ಕೋವಿಡ್-19 ನಿಂದಾಗಿ ಪ್ರವಾಸೋದ್ಯಮ ವಲಯದಲ್ಲಿ ಸುಮಾರು 15 ಸಾವಿರ ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಕೋವಿಡ್-19ರ ಹಿನ್ನೆಲೆಯಲ್ಲಿ ಪ್ರವಾಸೋದ್ಯಮಕ್ಕೆ ಭಾರೀ ಹಿನ್ನಡೆ ಉಂಟಾಗಿದೆ.

ರಾಜ್ಯದ ಜಿಡಿಪಿಗೆ ಪ್ರವಾಸೋದ್ಯಮದ ಕೊಡುಗೆ ಶೇ.14ರಷ್ಟಿದ್ದು, ಮುಂದಿನ ದಿನಗಳಲ್ಲಿ ಈ ಗುರಿಯನ್ನು ಹೆಚ್ಚಿಸುವ ಗುರಿ ಹೊಂದಲಾಗಿದೆ. ಕಳೆದ ವಾರವಷ್ಟೇ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಕರೆದು ಪ್ರವಾಸೋದ್ಯಮ ಅಭಿವೃದ್ಧಿ ಕುರಿತಂತೆ ಚರ್ಚಿಸಲಾಗಿದೆ ಎಂದರು. ಉಪಮುಖ್ಯಮಂತ್ರಿ ಡಾ. ಅಶ್ವv್ಥï ನಾರಾಯಣ್, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Facebook Comments