ಬಿಎಸ್‍ವೈ ಜನ್ಮದಿನಾಚರಣೆಗೆ ವಿಶೇಷ ಕಾರ್ಯಕ್ರಮ

ಈ ಸುದ್ದಿಯನ್ನು ಶೇರ್ ಮಾಡಿ

ಶಿವಮೊಗ್ಗ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ 88ನೇ ಜನ್ಮ ದಿನಾಚರಣೆಯನ್ನು ಶಿವಮೊಗ್ಗದಲ್ಲಿ ಅತ್ಯಂತ ವೈಭವೋಪೇತವಾಗಿ ನಡೆಸಲು ನಿರ್ಧರಿಸಲಾಗಿದೆ. ಬಿಎಸ್‍ವೈ ನಮ್ಮೊಲುಮೆ ಕಾರ್ಯಕ್ರಮವನ್ನು ಫೆ.28ರಂದು ಇಲ್ಲಿನ ಹಳೇ ಜೈಲು ಆವರಣದಲ್ಲಿ ನಿರ್ಮಿಸಲಾಗುವ ಬೃಹತ್ ವೇದಿಕೆಯಲ್ಲಿ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮ ನಡೆಯಲಿದ್ದು, ಇದರಲ್ಲಿ ಸಿಎಂ ಯಡಿಯೂರಪ್ಪ ಭಾಗವಹಿಸಲಿದ್ದಾರೆಂದು ಸೂಡಾ ಅಧ್ಯಕ್ಷ ಎಸ್.ಎಸ್.ಜ್ಯೋತಿ ಪ್ರಕಾಶ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಯ ಪರವಾಗಿ ಯಡಿಯೂರಪ್ಪ ಅವರನ್ನು ವಿಶಿಷ್ಟ ರೀತಿಯಲ್ಲಿ ಅಭಿನಂದಿಸಲಾಗುತ್ತದೆ. ಖ್ಯಾತ ಚಿತ್ರ ಸಾಹಿತಿ ಯೋಗರಾಜ್ ಭಟ್ ಅವರು ಬಿಎಸ್ ವೈ ಕುರಿತು ರಚಿಸಿರುವ ವಿಭಿನ್ನ ಗೀತೆಗೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದು, ಖ್ಯಾತ ಗಾಯಕರಾದ ವಿಜಯಪ್ರಕಾಶ್, ರಾಜೇಶ್ ಕೃಷ್ಣನ್ ಇದನ್ನು ಹಾಡಲಿದ್ದಾರೆ.

ಈ ಸಮಾರಂಭವನ್ನು ನಗರದ ವಿವಿಧ ಸಂಘ-ಸಂಸ್ಥೆಗಳು ಒಟ್ಟಾಗಿ ಆಯೋಜಿಸಿವೆ. ಅಭಿನಂದನಾ ಕಾರ್ಯಕ್ರಮದ ಬಳಿಕ ಅರ್ಜುನ್ ಜನ್ಯ, ರಾಜೇಶ್ ಕೃಷ್ಣನ್ , ವಿಜಯಪ್ರಕಾಶ್ ಮತ್ತಿತರ ಪ್ರಮುಖ ಕಲಾವಿದರ ತಂಡ ಸುಗಮ ಸಂಗೀತ ಕಾರ್ಯಕ್ರಮವನ್ನು ಪ್ರಸ್ತುತಪಡಿಸಲಿದೆ ಎಂದು ತಿಳಿಸಿದರು.

ಬಿಎಸ್‍ವೈ ಜನ್ಮ ದಿನಾಚರಣೆ ನಿಮಿತ್ತ ಅಂದಿನ ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲಾ ನಾಗರೀಕರಿಗೆ ಸಿಹಿ ವಿತರಿಸಲು ಉದ್ದೇಶಿಸಲಾಗಿದೆ ಎಂದರು. ಅಭಿನಂದನಾ ಸಮಿತಿ ಪ್ರಮುಖರಾದ ಕೆ.ಬಸಪ್ಪಗೌಡ, ಡಿ.ಎಸ್.ಅರುಣï, ಹೆಚ್.ಎಂ.ಚಂದ್ರಶೇಖರಪ್ಪ, ಬಳ್ಳೇಕೆರೆ ಸಂತೋಷ್ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Facebook Comments