ಎತ್ತಿನ ಹೊಳೆ ಯೋಜನೆಗೆ ಭೂಸ್ವಾಧೀನ ಚುರುಕು : ಸಚಿವ ರಮೇಶ್ ಜಾರಕಿಹೊಳಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.10-ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಭೂ ಸ್ವಾಧೀನ ಪ್ರಕ್ರಿಯೆ ಚುರುಕುಗೊಳ್ಳುತ್ತಿದ್ದು, ಮೊದಲ ಹಂತದ ಕಾಮಗಾರಿಗಳು 2021ರ ಮೇ ತಿಂಗಳೊಳಗೆ ಪೂರ್ಣಗೊಳ್ಳಲಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ತಿಳಿಸಿದರು.

ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ವಿಶ್ವೇಶ್ವರಯ್ಯ ಜಲ ನಿಗಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಾಸನ ಜಿಲ್ಲಾಯ ರೈತರು ಮತ್ತು ಕಾಫಿ ಬೆಳೆಗಾರರೊಂದಿಗೆ ಯೋಜನೆಯ ಭೂ ಸ್ವಾಧೀನ, ಕಾಮಗಾರಿ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಚಿವರು ಚರ್ಚೆ ನಡೆಸಿ ಮಾತನಾಡಿದರು.

ರೈತರು ಮತ್ತು ಜನ ಪ್ರತಿನಿಧಿಗಳು ಪಕ್ಷ ಭೇದ ಮರೆತು ಸಹಕರಿಸಿದಲ್ಲಿ ಕಾಲಮಿತಿಯೊಳಗೆ ಯೋಜನೆ ಪೂರ್ಣಗೊಳ್ಳಲಿದೆ ಎಂದು ಸಚಿವರು ತಿಳಿಸಿದರು.  ಸಭೆಯಲ್ಲಿ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಇಲಾಖೆಯ ಕಾರ್ಯದರ್ಶಿ ಅನಿಲ್ ಕುಮಾರ್, ವಿ.ಜೆ.ಎನ್. ಎಲï. ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣ ರಾವ್ ಪೇಶ್ವೆ, ರೈತ ಮುಖಂಡ ಸುರೇಂದ್ರ, ಕಾಫಿ ಬೆಳೆಗಾರರ ಸಂಘದ ಕೃಷ್ಣಪ್ಪ ಸೇರಿದಂತೆ ಹಾಸನ ಮತ್ತು ಸಕಲೇಶಪುರದ ರೈತರು ಪಾಲ್ಗೊಂಡಿದ್ದರು.

Facebook Comments