ಬಿಜೆಪಿ ರಾಜ್ಯ ನಾಯಕರ ಸಮ್ಮುಖ ಯೋಗಾ ರಮೇಶ್ ಪಕ್ಷಕ್ಕೆ ಮರು ಸೇರ್ಪಡೆ.

ಈ ಸುದ್ದಿಯನ್ನು ಶೇರ್ ಮಾಡಿ

ಅರಕಲಗೂಡು: ತಾಲೂಕು ಪೋಟ್ಯಾಟೊ ಕ್ಲಬ್ ಅಧ್ಯಕ್ಷ ಎಚ್. ಯೋಗಾ ರಮೇಶ್ ಅವರು ಬೆಂಗಳೂರಿನಲ್ಲಿ ಬಿಜೆಪಿಗೆ ಮರು ಸೇರ್ಪಡೆಯಾದರು.2013ರ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ 32 ಸಾವಿರ ಮತ ಪಡೆದು ರಾಜಕೀಯವಾಗಿ ನೆಲೆ ಕಂಡುಕೊಂಡಿದ್ದ ಯೊಗಾ ರಮೇಶ್ ಅವರು ನಂತರ ಬಿಜೆಪಿ ಸೇರಿದ್ದರು. ಆಗ ಬಿಜೆಪಿಯಲ್ಲೆ ಇದ್ದ ಇವರು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದರು.

ಕಳೆದ ಲೋಕಸಭಾ ಚುನಾವಣೆ ಸಮಯದಲ್ಲಿ ಮಾಜಿ ಸಚಿವ ಎ. ಮಂಜು ಬಿಜೆಪಿಗೆ ಸೇರ್ಪಡೆಯಾದ ಕ್ರಮವನ್ನು ವಿರೋಧಿಸಿ ಜಿಲ್ಲಾ ಅಧ್ಯಕ್ಷ ಸ್ಥಾನ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಇದೀಗ ಬಿಜೆಪಿ ಶಿಸ್ತು ಸಮಿತಿ ಮಾಜಿ ಸಚಿವ ಎ. ಮಂಜು ಅವರಿಗೆ ನೋಟೀಸ್ ನೀಡಿ ಜವಾಬ್ದಾರಿಯಿಂದ ಮುಕ್ತಿಗೊಳಿಸಿದೆ. ಈ ವೇಳೆ ಪಕ್ಷಾಂತರ ನಡೆಸುತ್ತಿರುವ ಎ. ಮಂಜು ವಿರುದ್ದ ವಾಗ್ದಾಳಿ ನಡೆಸುತ್ತಿದ್ದ ಯೋಗಾ ರಮೇಶ್ ಅವರು ಬಿಜೆಪಿಗೆ ಮರು ಸೇರ್ಪಡೆಯಾಗುವ ಸುಳಿವು ನೀಡಿದ್ದರು.

ಬೆಂಗಳೂರು ರಾಜ್ಯ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎನ್‌. ರವಿಕುಮಾರ್, ರಾಜ್ಯ ಉಪಾಧ್ಯಕ್ಷರಾದ ಶ್ರೀ ರಾಜೇಂದ್ರ, ಎಸ್‌ಸಿ ಮೋರ್ಚಾ ರಾಜ್ಯ ಅಧ್ಯಕ್ಷರಾದ ಶ್ರೀ ಛಲವಾದಿ ನಾರಾಯಣ ಸ್ವಾಮಿ, ಜಿಲ್ಲಾಧ್ಯಕ್ಷರಾದ ಶ್ರೀ ಹೆಚ್. ಕೆ. ಸುರೇಶ್, ಹಾಸನ ವಿಧಾನಪರಿಷತ್ ಅಭ್ಯರ್ಥಿಯಾದ ಶ್ರೀ ವಿಶ್ವನಾಥ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.

Facebook Comments

Sri Raghav

Admin