ಯೋಗೇಶ್‍ಗೌಡ ಹತ್ಯೆ ಪ್ರಕರಣದಲ್ಲಿ KAS ಅಧಿಕಾರಿ ಅರೆಸ್ಟ್..!

ಈ ಸುದ್ದಿಯನ್ನು ಶೇರ್ ಮಾಡಿ

ಧಾರವಾಡ,ಜು.8- ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್‍ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಎಎಸ್ ಅಧಿಕಾರಿ ಸೋಮುನ್ಯಾಮೇಗೌಡ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಗದಗದ ಎಪಿಎಂಸಿಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದ ಸೋಮುನ್ಯಾಮೇಗೌಡ ಈ ಹಿಂದೆ ವಿಲಯ್‍ಕುಲಕರ್ಣಿ ಸಚಿವರಾಗಿದ್ದಾಗ ಅವರ ಆಪ್ತ ಸಹಾಯಕರಾಗಿದ್ದರು.

ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಮಾರು 10ಕ್ಕೂ ಹೆಚ್ಚು ಬಾರಿ ಸಿಬಿಐ ಅಧಿಕಾರಿಗಳು ಸೋಮುನ್ಯಾಮೇಗೌಡ ಅವರನ್ನು ವಿಚಾರಣೆ ನಡೆಸಿದ್ದಾರೆ. ಜಿಲ್ಲಾಪಂಚಾಯತ್ ಸದಸ್ಯ ಯೋಗೇಶ್‍ಗೌಡ ಅವರನ್ನು 2016ರ ಜೂನ್ 15ರಂದು ಧಾರವಾಡದ ಸಪ್ತಾಪುರದ ಅವರ ಜಿಮ್ ಬಳಿ ಹತ್ಯೆ ಮಾಡಲಾಗಿತ್ತು.

ಬೈಕ್‍ನಲ್ಲಿ ಬಂದಿದ್ದ ಆರೋಪಿಗಳು ಯೋಗೇಶ್‍ಗೌಡ ಅವರ ಕಣ್ಣಿಗೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಆರಂಭದಲ್ಲಿ ತನಿಖೆ ನಡೆಸಿದ ಸ್ಥಳೀಯ ಪೆÇಲೀಸರು ಒಂದಿಷ್ಟು ಆರೋಪಿಗಳನ್ನು ಬಂಧಿಸಿ ಪ್ರಕರಣ ಇತ್ಯರ್ಥಗೊಳಿಸಲು ಮುಂದಾಗಿದ್ದರು.

ಆದರೆ, 2019ರ ಸೆಪ್ಟೆಂಬರ್‍ನಲ್ಲಿ ಸಿಬಿಐ ತನಿಖೆ ಆರಂಭವಾಗಿದ್ದು, ವಿಚಾರಣಾಧಿಕಾರಿಗಳು ಮಾಜಿ ಸಚಿವ ವಿನಯ್‍ಕುಲಕರ್ಣಿ ಅವರನ್ನು 2020ರ ನವೆಂಬರ್‍ನಲ್ಲಿ ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿನಯ್‍ಕುಲಕರ್ಣಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಗೆ ಬಂದ ಸಂದರ್ಭದಲ್ಲೇ ಸೋಮುನ್ಯಾಮೇಗೌಡ ಅವರನ್ನು ಬಂಧಿಸಿರುವುದು ಮಹತ್ವದ ತಿರುವು ಪಡೆದುಕೊಂಡಿದೆ.

Facebook Comments