ಮೋದಿ ಮೀಟ್ ಮಾಡಿದ ಯೋಗಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಜೂ.11-ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ನಿನ್ನೆ ಭೇಟಿಯಾಗಿದ್ದ ಯೋಗಿ ಇಂದು ಮೋದಿ ಅವರ ಮನೆಗೆ ತೆರಳಿ ಮಾತುಕತೆ ನಡೆಸಿದರು.

ಉತ್ತರ ಪ್ರದೇಶದಲ್ಲಿ ಭಾರಿ ರಾಜಕೀಯ ಬದಲಾವಣೆಯಾಗಲಿದೆ ಎಂಬ ಊಹಾಪೋಹ ಸುದ್ದಿಗಳು ಹರಿದಾಡುತ್ತಿದ್ದ ಸಂದರ್ಭದಲ್ಲೇ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿರುವ ಯೋಗಿ ಅವರು ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ತೀವ್ರ ಕೂತುಹಲಕ್ಕೆ ಕಾರಣವಾಗಿದೆ.

ಯೋಗಿ ಅವರ ಕಾರ್ಯವೈಖರಿಯಿಂದ ಮೋದಿ ಬೇಸತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಯೋಗಿ ದೆಹಲಿ ಪ್ರವಾಸ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಉತ್ತರಪ್ರದೇಶದ ನಾಯಕತ್ವ ಬದಲಾವಣೆ ಮಾಡುವ ಸಾಧ್ಯತೆಗಳು ಇಲ್ಲ. ಆದರೂ ಬ್ರಾಹ್ಮಣ ಸಮುದಾಯದ ಪ್ರಬಲ ನಾಯಕರೆಂದೆ ಗುರುತಿಸಿಕೊಂಡಿರುವ ಮೋದಿ ಅವರ ನೆಚ್ಚಿನ ವ್ಯಕ್ತಿ ಎ.ಕೆ.ಶರ್ಮಾ ಇಲ್ಲವೇ ನಿನ್ನೆಯಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿರುವ ಜಿತಿನ್ ಪ್ರಸಾದ್ ಅವರನ್ನು ಮುಖ್ಯಮಂತ್ರಿ ಗಾದಿ ಮೇಲೆ ಕೂರಿಸುವ ಪ್ರಯತ್ನಗಳು ಸದ್ದಿಲ್ಲದೆ ನಡೆಯುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Facebook Comments

Sri Raghav

Admin