ಖಾಸಗಿ ಹೊಟೇಲ್‍ನಲ್ಲಿ ತಂಗಿದ್ದ  ಯುವತಿ ಅನುಮಾನಾಸ್ಪದ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ : – ಖಾಸಗಿ ಹೋಟೆಲ್ ಬಳಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು ಹಲವು ಅನುಮಾನಗಳು ವ್ಯಕ್ತವಾಗಿದೆ.ಅರಕಲಗೂಡು ಮೂಲದ ಭವಿತಾ (23) ಎಂದು ಗುರುತಿಸಲಾಗಿದೆ. ಕಳೆದ 12 ದಿನಗಳಿಂದ ಬಿಎಂ ರಸ್ತೆಯಲ್ಲಿರುವ ಸರಾಯು ಹೋಟೆಲ್‍ನಲ್ಲಿ ರೂಂ ಪಡೆದಿದ್ದರು.

ಇಂದು ಬೆಳಗ್ಗೆ ಹೋಟೆಲ್‍ನ ಹಿಂಭಾಗ ಭವಿತಾ ಮೃತದೇಹ ಪತ್ತೆಯಾಗಿದೆ. ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುವುದು ತಿಳಿದು ಬಂದಿಲ್ಲ.ಕೈ ಮೇಲೆ ಪುನಿತ್ ಎಂದು ಹಚ್ಚೆ ಹಾಕಿಸಿಕೊಂಡಿದ್ದು, ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪೊಷಕರು ತನಿಖೆ ನಡೆಸುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ.

ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments