ಶೌಚಾಲಯದಲ್ಲಿ ಸುಟ್ಟ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ

ಈ ಸುದ್ದಿಯನ್ನು ಶೇರ್ ಮಾಡಿ

ಕಲಬುರಗಿ, ಡಿ.25- ಇಲ್ಲಿನ ಸಿಟಿ ಸೆಂಟರ್‍ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳ ಶವ ಸುಟ್ಟ ಸ್ಥಿತಿಯಲ್ಲಿ ಶೌಚಾಲಯದಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಸಂಗಮೇಶ್ವರ ಕಾಲೋನಿ ನಿವಾಸಿ ನಾಗರತ್ನ ಹಿರೇಮಠ್ (20) ಎಂದು ಪೊಲೀಸರು ತಿಳಿಸಿದ್ದಾರೆ.

ಸಿಟಿ ಸೆಂಟರ್‍ನ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಈಕೆ ನಿನ್ನೆ ಮಧ್ಯಾಹ್ನ ಊಟಕ್ಕೆಂದು ಹೊರಹೋಗಿದ್ದವರು ವಾಪಸ್ ಬಂದಿರಲಿಲ್ಲ. ಇಂದು ಬೆಳಗ್ಗೆ ಶೌಚಾಲಯದಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಮೂಡಿಸಿದೆ.

ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದ್ದರೂ ಆಕೆ ಹೀಗೆ ಮಾಡಲು ಕಾರಣಗಳೇನು ಎಂಬುದರ ಬಗ್ಗೆ ಆಕೆಯ ಸಹೋದ್ಯೋಗಿಗಳುಅಚ್ಚರಿ ವ್ಯಕ್ತಪಡಿಸಿದ್ದಾರೆ. ಘಟನೆಯಿಂದಾಗಿ ಸಿಟಿ ಸೆಂಟರ್‍ನಲ್ಲಿ ಕೆಲಸ ಮಾಡುತ್ತಿದ್ದವರು ಕೂಡ ಆತಂಕಗೊಂಡಿದ್ದಾರೆ. ಬ್ರಹ್ಮಪುತ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Facebook Comments