ಯುವ ಕಾಂಗ್ರೆಸ್‍ನಿಂದ ಸಂಸತ್ ಘೆರಾವ್

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಆ.5- ನಿರಂತರ ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗದಿಂದ ಯುವ ಜನತೆ ತತ್ತರಿಸುತ್ತಿರುವ, ರೈತ ವಿರೋಧಿ ನೀತಿಗಳು ಹಾಗೂ ಕೇಂದ್ರದ ಪೆಗಾಸಸ್ ಬೇಹುಗಾರಿಕೆ ವಿರೋಧಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್‍ನಿಂದ ರಾಜಧಾನಿಯಲ್ಲಿಂದು ಸಂಸತ್ ಘೆರಾವ್ ನಡೆಸಲಾಯಿತು.

ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ರಕ್ಷಾ ರಾಮಯ್ಯ ನೇತೃತ್ವದಲ್ಲಿ ಬೃಹತ್ ಪ್ರತಿಘಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಮುಖಂಡರು ಪಾಲ್ಗೊಂಡು ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಘೋಷಣೆ ಕೂಗಿದರು. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿದರು.

Facebook Comments