ಬಿಜೆಪಿ ಧರಣಿ ಹಿಂದೆ ರಾಜಕೀಯ ಉದ್ದೇಶವಿದೆ : ದತ್ತ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.15- ಜಿಂದಾಲ್ ಕಂಪನಿಗೆ ಜಮೀನು ನೀಡುವ ಬಗ್ಗೆ ಸಚಿವ ಸಂಪುಟ ಉಪಸಮಿತಿ ರಚಿಸಲು ತೀರ್ಮಾನ ಕೈಗೊಂಡಿದ್ದರೂ ಬಿಜೆಪಿ ಅಹೋರಾತ್ರಿ ಧರಣಿ ನಡೆಸುತ್ತಿರುವುದರ ಹಿಂದೆ ರಾಜಕೀಯ ಉದ್ದೇಶವಿದೆ ಎಂದು ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತ ಟೀಕಿಸಿದರು.

ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಿಂದಾಲ್ ಕಂಪನಿಗೆ ಜಮೀನು ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮರು ಪರಿಶೀಲನೆ ಮಾಡಲು ಸಂಪುಟ ಉಪಸಮಿತಿ ರಚಿಸಲು ತೀರ್ಮಾನಿಸಲಾಗಿದೆ.

ಜಮೀನು ನೀಡುವ ವಿಚಾರವನ್ನು ಮರು ವಿಮರ್ಶೆಗೆ ಒಳಪಡಿಸಲು ಸರ್ಕಾರ ಮುಂದಾಗಿದ್ದು, ಜಿಂದಾಲ್‍ಗೆ ಕ್ರಯ ಪತ್ರ ನೀಡುವುದನ್ನು ಬಾಕಿ ಉಳಿಸಿದೆ. ಆದರೂ ರಾಜಕೀಯ ಪ್ರೇರಿತವಾಗಿ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಒಂದು ವೇಳೆ ಜಿಂದಾಲ್ ಕಂಪನಿ ಸ್ಥಳೀಯರಿಗೆ ಉದ್ಯೋಗ ಕೊಡುವುದಿಲ್ಲ, ಕೈಗಾರಿಕಾ ಅಭಿವೃದ್ಧಿಯಾಗುವುದಿಲ್ಲ. ಅಕ್ರಮ ಗಣಿಗಾರಿಕೆಗೆ ಅವಕಾಶ ದೊರೆಯಲಿದೆ ಎನ್ನುವುದಾದರೆ ಸರ್ಕಾರ ಖಂಡಿತವಾಗಿಯೂ ಜಿಂದಾಲ್ ಕಂಪನಿಗೆ ಜಮೀನು ನೀಡುವುದಿಲ್ಲ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

Facebook Comments