ಶಾಂತಿ ಕಾಪಾಡುವಂತೆ ಜಮೀರ್ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.13- ವ್ಯಕ್ತಿಯೊಬ್ಬ ಪ್ರವಾದಿ ಮಹಮ್ಮದ್ ಪೈಗಂಬರರನ್ನು ನಿಂದಿಸಿರುವುದು ವೈಯಕ್ತಿಕವಾಗಿ ನನಗೂ ಸಾಕಷ್ಟು ನೋವಾಗಿದೆ.

ನಮ್ಮ ನೋವು, ಆಕ್ರೋಶವನ್ನು ಕಾನೂನು ಹೋರಾಟದ ಮೂಲಕವೇ ತೋರಿಸಿ, ಕಠಿಣ ಶಿಕ್ಷೆಗೆ ಆಗ್ರಹಿಸಬೇಕೇ ಹೊರತು ಅಶಾಂತಿಯ ಮೂಲಕವಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕ ಜಮೀರ್ ಅಹಮ್ಮದ್ ಹೇಳಿದ್ದಾರೆ.

ಡಿಜೆಹಳ್ಳಿ ಮತ್ತು ಕೆಜಿಹಳ್ಳಿಯಲ್ಲಿ ನಡೆದ ಘಟನೆ ಬಗ್ಗೆ ಟ್ವೀಟ್ ಮಾಡಿರುವ ಅವರು, ನ್ಯಾಯಕ್ಕಾಗಿ ನಡೆಸುವ ಕಾನೂನು ಹೋರಾಟದಲ್ಲಿ ನಾನೂ ನಿಮ್ಮ ಜೊತೆಗಿರುತ್ತೇನೆ.

ಗೋಲಿಬಾರ್‍ನಿಂದ ಮೃತಪಟ್ಟ ಯುವಕರ ಮನೆಗೆ ನಿನ್ನೆ ಭೇಟಿ ನೀಡಿದ್ದೆ, ನಿಜಕ್ಕೂ ಅವರ ಕುಟುಂಬಗಳ ಪರಿಸ್ಥಿತಿ ಕಂಡು ಕಣ್ಣೀರು ಬಂತು.

ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿ, ತಂಗಿಗೆ ಯಾರು ದಿಕ್ಕು? ಯಾರೋ ಕಿಡಿಗೇಡಿಗಳು ಕಲ್ಲು ತೂರಿ, ಬೆಂಕಿ ಹಚ್ಚಿದರು, ಬಲಿಯಾದವರು ಇನ್ಯಾರೋ ಎಂದು ವಿಷಾಸಿದ್ದಾರೆ.

ಹಿರಿಯ ಪೊಲೀಸ್ ಅಕಾರಿಗಳು, ಧಾರ್ಮಿಕ ಮುಖಂಡರೊಂದಿಗೆ ಚರ್ಚೆ ಮಾಡಿದ್ದೇನೆ. ತಪ್ಪಿತಸ್ಥರಿಗೆ ಖಂಡಿತಾ ಕಠಿಣ ಶಿಕ್ಷೆ ಆಗಲಿದೆ.

ಗಾಳಿ ಸುದ್ದಿಗಳಿಗೆ ಕಿವಿ ಕೊಡಬೇಡಿ, ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯುವ ನಮ್ಮ ನಿರ್ಧಾರ ಅಚಲವಾಗಿರಲಿ. ಶಾಂತಿ, ಸೌಹಾರ್ದತೆಗೆ ಎಲ್ಲರೂ ಸಹಕರಿಸಿ ಎಂದು ಕೈ ಮುಗಿದ್ದು ಮನವಿ ಮಾಡುತ್ತೇನೆ ಎಂದು ಪ್ರಾರ್ಥಿಸಿದ್ದಾರೆ.

Facebook Comments

Sri Raghav

Admin