ನೇಣಿಗೆ ಶರಣಾದ ಜಿಮ್ ಟ್ರೈನರ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.24- ಜಿಮ್ ತರಬೇತುದಾರ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಆರ್‍ಆರ್‍ನಗರದ ಮಾರಪ್ಪನಲೇಔಟ್ ನಿವಾಸಿ ಕಾರ್ತಿಕ್(29) ಆತ್ಮಹತ್ಯೆ ಮಾಡಿಕೊಂಡಿರುವ ಜಿಮ್ ಟ್ರೈನರ್. ಈತ ನಿನ್ನೆ ರಾತ್ರಿ ಮನೆಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರೇಮ ವೈಫಲ್ಯದಿಂದ ಈತ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಕಳೆದ ಮೂರು ವರ್ಷದಿಂದ ಹುಡುಗಿಯೊಬ್ಬಳನ್ನು ತಾನು ಪ್ರೀತಿಸುತ್ತಿದ್ದು, ಆಕೆ ಈಗ ನನ್ನಿಂದ ದೂರವಾಗಿದ್ದಾಳೆ ಎಂದು ಕಾರ್ತಿಕ್ ಸ್ನೇಹಿತರೊಂದಿಗೆ ಹೇಳಿಕೊಂಡಿದ್ದನೆಂದು ಗೊತ್ತಾಗಿದೆ.

ಕಾರ್ತಿಕ್ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆ ಶವಾಗಾರದಲ್ಲಿಡಲಾಗಿದೆ. ಆರ್‍ಆರ್‍ನಗರ ಠಾಣೆ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Facebook Comments

Sri Raghav

Admin